ಬೆಂಗಳೂರು:2024ನೇ ಸಾಲಿಗೆ ಕರ್ನಾಟಕದಲ್ಲಿನ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ನೋಂದಣಿ ಮಾಡಲು ಹಾಗು ರೋಲ್ ನಂಬರ್ ಲಿಂಕ್ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ವಿಸ್ತರಿಸಿದೆ.
ಅಭ್ಯರ್ಥಿಗಳ ಮತ್ತು ಪೋಷಕರ ಮನವಿ ಮೇರೆಗೆ, 2024ನೇ ಸಾಲಿಗೆ ಕರ್ನಾಟಕದಲ್ಲಿನ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಹೊಸದಾಗಿ ನೋಂದಣಿ ಮಾಡಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಲು ಮತ್ತು ಈಗಾಗಲೇ ಯುಜಿಸಿಇಟಿ-2024 ಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಯುಜಿನೀಟ್ 2024ರ ರೋಲ್ ನಂಬರ್ ನಮೂದಿಸಲು ಆ.16ರ ಸಂಜೆ 6 ರಿಂದ ಆ.19 ಬೆಳಗ್ಗೆ 10 ರವರೆಗೆ ಪೋರ್ಟಲನ್ನು ತೆರೆದಿಡಲಾಗಿದೆ. ಈಗಾಗಲೇ ನೋಂದಣಿ ಮಾಡಿರುವವರು ಮತ್ತೆ ನೋಂದಣಿ ಮಾಡುವ ಅಗತ್ಯವಿರುವುದಿಲ್ಲ.
ಎಸ್‌ಸಿ, ಎಸ್‌ಟಿ, ಓಬಿಸಿ ಅರ್ಹತಾ ಮಾನದಂಡಗಳು ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ದಾಖಲೆಗಳ ಪರಿಶೀಲನೆ ಹಾಗು ಮುಂದಿನ ಪ್ರಕ್ರಿಯೆಗಳ ಕುರಿತು ಹೆಚ್ಚಿನ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಿಂದ ಪಡೆಯಬಹುದು.
ಆ.14ರವರಗೆ ನಡೆದಿದ್ದ ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದ ಅಭ್ಯರ್ಥಿಗಳು ಆ.19 ಬೆಳಗ್ಗೆ 11 ರಿಂದ ಮಧ್ಯಾಹ್ನ 2ರೊಳಗೆ ಮೂಲ ದಾಖಲೆಗಳೊಂದಿಗೆ ಪರಿಶೀಲನೆಗೆ ಹಾಜರಾಗಬಹುದಾಗಿದೆ. ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಯುಜಿ ನೀಟ್ ಮಾಹಿತಿ ಪುಸ್ತಕದಲ್ಲಿ ನೋಡಿಕೊಳ್ಳಬಹುದು.
ಎಲ್ಲಾ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದಲೇ ನಡೆಸಲಾಗುವುದರಿಂದ ಯುಜಿ ನೀಟ್ 2024 ರಲ್ಲಿ ಅರ್ಹತೆ ಪಡೆದ ಎಲ್ಲಾ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗಲು ಕೆಇಎ ನಲ್ಲಿ ಆನ್‌ಲೈನ್ ಮೂಲಕ ನೊಂದಾಯಿಸಿ, ದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
