ಬೆಂಗಳೂರು:ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿ ಜೈಲಿನಲ್ಲಿ ಇಟ್ಟಿರುವುದು ಸಂವಿಧಾನ ಬಾಹಿರ ಕ್ರಮ. ನಾಡಿನ ರೈತರನ್ನು ಈ ಕೂಡಲೆ ಬಿಡುಗಡೆ ಮಾಡಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು‌. ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ನಮ್ಮ ರೈತರನ್ನು ವಶಕ್ಕೆ ಪಡೆದು ನಾಲ್ಕು ದಿವಸವಾಗಿದೆ. ಹೀಗಾಗಿ ರೈತರನ್ನು ಸ್ಥಳಾಂತರಿಸದೆ ಕೂಡಲೆ ಬಿಡುಗಡೆಗೊಳಿಸುವಂತೆ ಪತ್ರದ ಮೂಲಕ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ರೈತರ ಯೋಗಕ್ಷೇಮ ವಿಚಾರಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯದ 70 ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ದೆಹಲಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ರೈತರನ್ನು ಪೊಲೀಸರು ಸೋಮವಾರ (ಫೆ.12) ವಶಕ್ಕೆ ಪಡೆದಿದ್ದರು. ಧಾರವಾಡ ಜಿಲ್ಲೆಯ 16 ರೈತರು ಕೂಡ ಇದರಲ್ಲಿ ಸೇರಿದ್ದಾರೆ. ವಶಕ್ಕೆ ಪಡೆಯಲಾಗಿರುವ ರೈತರನ್ನು ಕಲ್ಯಾಣ ಮಂಟಪವೊಂದರಲ್ಲಿ ಇರಿಸಿಕೊಳ್ಳಲಾಗಿತ್ತು.
ಇನ್ನು ರಾಜ್ಯ ರೈತರನ್ನು ಬಿಡುಗಡೆಗೊಳಿಸುವಂತೆ ಸಿದ್ದರಾಮಯ್ಯ ಅವರು ಮಧ್ಯಪ್ರದೇಶ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಬೇಕೆಂದು ಕರ್ನಾಟಕ ಜಂಟಿ ಅಧಿವೇಶನದಲ್ಲಿ ಸದಸ್ಯರು ಒತ್ತಾಯಿಸಿದ್ದರು.
‘ಚುನಾವಣಾ ಬಾಂಡ್’ ಎಂದರೇನು, ಸುಪ್ರೀಂ ಕೋರ್ಟ್ ನಿಷೇಧಿಸಿದ್ದೇಕೆ?

ಇಂದು ಮತ್ತೆ ಸರ್ಕಾರದೊಂದಿಗೆ ರೈತರ ಸಭೆ: ಪಂಜಾಬ್‌ನಲ್ಲಿ 4 ಗಂಟೆಗಳ ಕಾಲ ರೈಲು ತಡೆ ಚಳವಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + fifteen =
Remember me
