ಬೆಂಗಳೂರು:ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ (ಕಾನ್ಫಿಡಾ) ನೀಡುತ್ತಿದ್ದ ಪ್ರಶಸ್ತಿ ಮತ್ತೆ ಜಾರಿಗೆ ಬರಲಿದೆ ಎಂಬುದಾಗಿ ಸಂಘದ ನೂತನ ಅಧ್ಯಕ್ಷರು ಘೋಷಣೆ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ನೂತನ ಅಧ್ಯಕ್ಷ ಎನ್​.ಆರ್​.ನಂಜುಂಡೇಗೌಡ ಈ ವಿಷಯ ತಿಳಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಸಾಕಷ್ಟು ಗೊಂದಲ, ವಿವಾದಗಳ ನಂತರ ಚುನಾವಣೆ ನಡೆದು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ (ಕಾನ್ಫಿಡಾ) ಮುಂಬರುವ ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.
ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘಕ್ಕೆ ಒಂದು ದೊಡ್ಡ ಪರಂಪರೆ ಇದೆ. ಪುಟ್ಟಣ್ಣ ಕಣಗಾಲ್, ರಾಜೇಂದ್ರಸಿಂಗ್ ಬಾಬು ಅಂಥವರು ಕಟ್ಟಿ ಬೆಳೆಸಿದ, 4 ದಶಕಗಳ ಇತಿಹಾಸವಿರುವ ಈ ಸಂಘ ರಾಜ್ಯಪ್ರಶಸ್ತಿಗಿಂತ ಕಮ್ಮಿ ಇಲ್ಲದಂತೆ ಕಾನ್ಫಿಡಾ ಅವಾರ್ಡ್ ಸಮಾರಂಭ ನಡೆಸಿಕೊಂಡು ಬಂದಿತ್ತು. ಆದರೆ ಈ ನಡುವೆ ಕಾರಣಾಂತರಗಳಿಂದ ಅದು ನಿಂತುಹೋಗಿತ್ತು. ಈಗ ನನ್ನ ಜೊತೆಗಿರುವ ತಂಡ ಎನರ್ಜೆಟಿಕ್ ಆಗಿದೆ. ಅದನ್ನು ಮತ್ತೆ ಮುಂದುವರಿಸಿಕೊಂಡು ಹೋಗುತ್ತೇವೆ ಎಂಬುದಾಗಿ ಅವರು ಹೇಳಿದರು.
ಅಲ್ಲದೆ ಕಳೆದ ನಾಲ್ಕು ದಶಕಗಳಿಗೂ ಮೇಲ್ಪಟ್ಟು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನಿರ್ದೇಶಕರನ್ನು ಗೌರವಿಸುವ ಕಾರ್ಯಕ್ರಮವನ್ನು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸ್ಕೌಟ್ ಭವನದಲ್ಲಿ ಇದೇ ತಿಂಗಳ 30ರಂದು ಹಮ್ಮಿಕೊಂಡಿದ್ದೇವೆ. ಸದ್ಯ ಸಂಘದಲ್ಲಿ ಯಾವುದೇ ಬಂಡವಾಳ ಇಲ್ಲದಿದ್ದರೂ ಈ ಕಾರ್ಯಕ್ರಮ ಮಾಡಬೇಕು ಎಂದಾಗ ಸಾಕಷ್ಟು ಜನ ಕಲಾವಿದರು, ನಿರ್ಮಾಪಕರು ಕೈ ಜೋಡಿಸುತ್ತಿದ್ದಾರೆ. ಅದೇ ಧೈರ್ಯದ ಮೇಲೆ ನಾವು ಈ ಸಾಹಸ ಮಾಡುತ್ತಿದ್ದೇವೆ, ಸದ್ಯ ಸಂಘದ ತಾತ್ಕಾಲಿಕ ಕಚೇರಿಯನ್ನು ಶೇಷಾದ್ರಿಪುರದಲ್ಲಿ ತೆರೆದಿದ್ದೇವೆ. ಅಲ್ಲದೆ ಸಂಘಕ್ಕೆ ಹೊಸದಾಗಿ ಸದಸ್ಯರನ್ನು ಸೇರಿಕೊಳ್ಳುವಂತೆ ಪ್ರೋತ್ಸಾಹಿಸುತ್ತೇವೆ ಎಂದರು. ಸಂಘದ ಪದಾಧಿಕಾರಿಗಳಾದ ಎಂ.ಜಿ.ರಾಮಮೂರ್ತಿ, ನಾಗೇಂದ್ರ ಅರಸ್, ವಿಶ್ವನಾಥ್, ಮಂಜು ಮಸ್ಕಲ್‌ಮಟ್, ಕಾರಂಜಿ ಶ್ರೀಧರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಸಂಚಾರ ದಟ್ಟಣೆ ನಿವಾರಿಸಲು ವಿಶೇಷ ಆಯುಕ್ತರ ಹುದ್ದೆ ಸೃಷ್ಟಿ; ಎಡಿಜಿಪಿ ಡಾ.ಎಂ.ಎ. ಸಲೀಂ ನೇಮಕ

ಪೊಲೀಸ್ ಮನೆಗೇ ಹೊಕ್ಕ ಕಳ್ಳರು; ಪರಾರಿ ಆಗುವಾಗ ಅಡ್ಡಬಂದ ಎಎಸ್​ಐ ಪುತ್ರನಿಗೆ ಗುಂಡೇಟು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
