ಬೆಂಗಳೂರು:ಥಂಡಿ ವಾತಾವರಣ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ಕುಸಿತವಾಗಿದೆ.
ಸೋಮವಾರ ಬೀದರ್ 5.5, ವಿಜಯಪುರ 6.5, ಬದಾಮಿ 6.0, ಬಳ್ಳಾರಿ 7.2, ಧಾರವಾಡ 9.8, ಬೆಳಗಾವಿ 10 ಹಾಗೂ ಕಲಬುರಗಿ 11.4 ಡಿಗ್ಸಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಗಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಗಣನೀಯ ಕುಸಿತವಾಗಿದ್ದು, ಆ ಜಿಲ್ಲೆಗಳ ಜನರು ನಡಗುವಂತಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಕೆಲ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಏಕಾಏಕಿ 10 ಡಿಗ್ರಿ ಸೆಲ್ಸಿಯಸ್ ಕುಸಿತಗೊಂಡಿದೆ.
ಚಂಡಮಾರುತ ಪ್ರಭಾವ, ಮೋಡ ಕವಿದ ವಾತಾವರಣ ಹಾಗೂ ವಾತಾವರಣದಲ್ಲಿ ತೇವಾಂಶ ಇರವ ಕಾರಣದಿಂದ ಚಳಿ ಮತ್ತು ಶೀತಗಾಳಿ ಹೆಚ್ಚು ಕಾಣಿಸಿಕೊಂಡಿದೆ. ಉತ್ತರ ಭಾರತದಲ್ಲಿ ಈಗಾಗಲೇ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶ ಕುಸಿತವಾಗಿದೆ. ಉತ್ತರದಿಂದ ದಕ್ಷಿಣ ದಿಕ್ಕಿನತ್ತ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚಳಿ ಹೆಚ್ಚಾಗಲು ಕಾರಣವಾಗಿದೆ. ಐದಾರು ದಿನಗಳಿಂದ ಕೆಲವಡೆ ಹಗಲಿನಲ್ಲಿ ಬಿಸಿಲು ಕಡಿಮೆ ಇರುವ ಜತೆಗೆ ಸಂಜೆ,ರಾತ್ರಿ ವೇಳೆ ತಂಪಾದ ಗಾಳಿ ಬೀಸತೊಡಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − three =
Remember me
