ಬೆಂಗಳೂರು:ಕೋವಿಡ್​-19 ಸೋಂಕಿತರಿಗೆ ರಾಜ್ಯ ಸರ್ಕಾರ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಿದ್ದಲ್ಲದೆ, ಪರೀಕ್ಷೆಯನ್ನೂ ಉಚಿತವಾಗಿಯೇ ನಡೆಸಿದೆ. ಇದೀಗ ಕರೊನಾ ಲಸಿಕೆ ವಿತರಣೆಗೂ ಸರ್ಕಾರ ಸಜ್ಜಾಗಿದ್ದು, ಆರಂಭದಲ್ಲಿ ಪ್ರಾಯೋಗಿಕವಾಗಿ ಎಷ್ಟು ಮಂದಿಗೆ ಲಸಿಕೆ ನೀಡಲಾಗುವುದು ಎಂಬುದನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಹಿರಂಗ ಪಡಿಸಿದ್ದಾರೆ.
ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು. ಪ್ರಪಂಚದಲ್ಲಿ ಶೇ.15ರಿಂದ 20ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿವೆ. ಲಸಿಕೆಯಿಂದ ಕೆಲ ಅಡ್ಡ ಪರಿಣಾಮಗಳು ಬರಬಹುದು. ಆದರೆ ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಸಂಶೋಧನೆಗೆ 900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಸಿಕೆ ಪ್ರಯೋಗ ನಡೆಯುತ್ತಿರುವ ಸಂಸ್ಥೆಗಳಿಗೆ ಖುದ್ದಾಗಿ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಚಿಕಿತ್ಸೆಗಾಗಿ 300 ಕೋಟಿ ರೂಪಾಯಿಗೂ ಹೆಚ್ಚು ಹಣ ಬಿಡುಗಡೆ ಮಾಡಿ ಉಚಿತ ಚಿಕಿತ್ಸೆ ನೀಡಿದೆ. ದಿನಕ್ಕೆ 1.25 ಲಕ್ಷ ಪರೀಕ್ಷೆ ಮಾಡುತ್ತಿದ್ದು, ಈವರೆಗೆ 1.20 ಕೋಟಿ ಉಚಿತ ಪರೀಕ್ಷೆ ಮಾಡಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ. 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದು ತಿಳಿಸಿದರು.
ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲಿಗೆ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು, ಕ್ರಮೇಣ ಹೆಚ್ಚು ಜನರಿಗೆ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಪಾರಂಪರಿಕ ತಾಣದಲ್ಲಿ ಸೆಕ್ಸಿ ಪೋಸ್​ ಕೊಟ್ಟ ಮಾಡೆಲ್​; ಫೋಟೋಗ್ರಫರ್​​ಗೂ ಕಾದಿತ್ತು ಗಂಡಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + five =
Remember me
