ಬೆಂಗಳೂರು:“ಬಿಲ್ಡ್​ ಫಾರ್​ ದಿ ವರ್ಲ್ಡ್​” ಪರಿಕಲ್ಪನೆಯಡಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ‘ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶ’ಕ್ಕೆ ಇಂದು(ನ.2) ಚಾಲನೆ ಸಿಕ್ಕಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ಜಗತ್ತಿನ ಖ್ಯಾತನಾಮ ಉದ್ಯಮಿಗಳು, ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದು, ಅಂದಾಜು 7 ಲಕ್ಷ ಕೋಟಿ ರೂ. ಹೂಡಿಕೆಯಾಗುವ ಹಾಗೂ ಅಂದಾಜು 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಹೂಡಿಕೆಗೆ ಪೂರಕವಾದ ವಾತಾವರಣ, ನಿಯಮಗಳ ಸಡಿಲಿಕೆ, ಪ್ರೋತ್ಸಾಹಕ ಯೋಜನೆಗಳು, ಅಗತ್ಯ ಭೂಮಿ, ನಿರಂತರ ಫಾಲೋಅಪ್​ಗೆ ಅಧಿಕಾರಿಗಳ ನೇಮಕ ಸೇರಿ ವಿವಿಧ ಕ್ರಮಗಳನ್ನು ಕೈಗೊಂಡಿರುವ ಸರ್ಕಾರ, ಹೂಡಿಕೆದಾರರಿಗೆ ರತ್ನಗಂಬಳಿ ಹಾಸಿದೆ.
ಜಾಗತಿಕ ಹೂಡಿಕೆದಾರ ಸಮಾವೇಶ-2022.#InvestKarnataka2022#GIM2022@narendramodi@BSBommaihttps://t.co/nBSvn28uHG
— CM of Karnataka (@CMofKarnataka)November 2, 2022

ಇನ್ವೆಸ್ಟ್ ಕರ್ನಾಟಕ- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಇಂದು ಬೆಳಗ್ಗೆ 10ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿ ಭಾಷಣ ಮಾಡಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಮಾವೇಶದ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಉದ್ಘಾಟಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ ಪಿಯೂಷ್ ಗೋಯೆಲ್, ಕೈಗಾರಿಕೆ ಸಚಿವ ಮುರುಗೇಶ್​ ನಿರಾಣಿ, ಐಟಿ-ಬಿಟಿ ಸಚಿವ ಅಶ್ವತ್ಥ್​ ನಾರಾಯಣ್​, ಸಚಿವ ಎಂಟಿಬಿ ನಾಗರಾಜ್, ಮೈಸೂರಿನ ರಾಜವಂಶಸ್ಥೆ ಪ್ರಮೋದಾ ದೇವಿ ಉಪಸ್ಥಿತರಿದ್ದರು.
ನನ್ನನ್ನು ಮುಗಿಸಲು ಮುಧೋಳ-ಬೆಂಗಳೂರಿಂದ ಗ್ಯಾಂಗ್​ ಬಂದಿತ್ತು: ಹೊಸ ಬಾಂಬ್​ ಸಿಡಿಸಿದ ಯತ್ನಾಳ್​

ಇನ್ವೆಸ್ಟ್​ ಕರ್ನಾಟಕ ಸಮಾವೇಶಕ್ಕೆ ಪ್ರಧಾನಿ ಚಾಲನೆ: ಬ್ರ್ಯಾಂಡ್ ಬೆಂಗಳೂರು ಎಂದು ಕೊಂಡಾಡಿದ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 6 =
Remember me
