ಬೆಂಗಳೂರು:ಅನಧಿಕೃತ ಟ್ರೆಕ್ಕಿಂಗ್​ಗೆ ಕಡಿವಾಣ ಹೇರುವ ನಿಟ್ಟಿನಲ್ಲಿ ಮುಂದಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರ ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ,  ಆನ್​​ಲೈನ್​​​​ ಬುಕ್ಕಿಂಗ್​ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಕಾರಣ ನಿಷೇಧಿಸಲಾಗಿದೆ. ಅರಣ್ಯ ವ್ಯಾಪ್ತಿಯ ಗಿರಿ ಶಿಬಿರಗಳಲ್ಲಿ ಚಾರಣ ಮಾಡುವರ ಹವ್ಯಾಸ ಏರಿಕೆಯಾಗಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಯುವಜನರಲ್ಲಿ ಇತ್ತೀಚೆಗೆ ಅರಣ್ಯವ್ಯಾಪ್ತಿಯ ಗಿರಿ ಶಿಖರಗಳಲ್ಲಿ ಚಾರಣ ಮಾಡುವ ಹವ್ಯಾಸ ಅಧಿಕವಾಗಿದ್ದು, ಇದು ವಾರಾಂತ್ಯದಲ್ಲಿ ಜನದಟ್ಟಣೆಗೆ ಕಾರಣವಾಗಿದೆ. ಹೀಗೆ ಬರುವವರು ಅರಣ್ಯದ ಅಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮನಸೋಇಚ್ಛೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಉಳಿದ ಆಹಾರ ಪದಾರ್ಥ ಇತ್ಯಾದಿಗಳನ್ನು ಎಸೆಯುತ್ತಿದ್ದು, ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಇದನ್ನೂ ಓದಿ:ನಾನು ಕೇಸರಿ ಶಾಲು ಧರಿಸುವುದು ಮಹಾ ಅಪರಾಧವೇ: ಮಾಜಿ ಸಿಎಂ ಎಚ್​ಡಿಕೆ ಪ್ರಶ್ನೆದಿ.26.01.2024ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಮಾಧ್ಯಮಗಳಲ್ಲೂ ವರದಿಯಾಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ. ಆತಂಕ ವ್ಯಕ್ತಪಡಿಸಿದ್ದಾರೆ. ಹೀಗೆ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಜನರು ದಟ್ಟ ಅರಣ್ಯವಿರುವ ಗಿರಿ ಪ್ರದೇಶಗಳಿಗೆ, ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ನಿಯಂತ್ರಿಸುವುದು ಮತ್ತು ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸವಾಲಾಗುತ್ತದೆ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ ಮತ್ತು ಜಲ ಮೂಲಗಳೂ ಕಲುಷಿತಗೊಳ್ಳುವ ಅಪಾಯ ಇದೆ.ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ (SOP) ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವಂತೆ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಸೂಚಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
