ಬೆಂಗಳೂರು:ಉತ್ಸವಗಳಿಗೆ ಕೋಟ್ಯಂತರ ರೂ. ಖರ್ಚು ಮಾಡುವ ಸರ್ಕಾರಕ್ಕೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡಲು ಆಗುವುದಿಲ್ಲವೇ? ಎಂದು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.
ಹೈಕೋರ್ಟ್​ ಚಾಟಿ ಬೀಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಅಲರ್ಟ್​ ಆಗಿದೆ. ಸಮವಸ್ತ್ರವನ್ನು ಸಮಪರ್ಕವಾಗಿ ವಿತರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದು, ಎರಡು ವಾರದ ಒಳಗೆ ಸಮವಸ್ತ್ರ ಮತ್ತು ಶೂ ಸಾಕ್ಸ್​ಗಳನ್ನು ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಸುಮಾರು 21 ಜಿಲ್ಲೆಗಳ ಮಕ್ಕಳಿಗೆ ಸಮವಸ್ತ್ರವನ್ನು ನೀಡದೇ ಸರ್ಕಾರ ಸುಮ್ಮನಾಗಿತ್ತು. ಇದೀಗ ಹೈಕೋರ್ಟ್​ ಛೀಮಾರಿ ಹಾಕಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತಿದ್ದು, ಸಮವಸ್ತ್ರ ವಿತರಣೆಗೆ ಮುಂದಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಹಾಗೂ ಎರಡು ಜತೆ ಕಾಲು ಚೀಲ ನೀಡಬೇಕು ಎಂದು 2019ರ ಆ.28ರಂದು ಹೈಕೋರ್ಟ್ ನೀಡಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿ ಮಂಜುನಾಥ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮಂಗಳವಾರ (ಜ.31) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಲ್ಲಿಸಿದ ಪ್ರಮಾಣಪತ್ರದ ಪ್ರಕಾರ 2019-20 ಮತ್ತು 2020-21ನೇ ಸಾಲಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಕೇವಲ ಒಂದು ಜೊತೆ ಸಮವಸ್ತ್ರ ಕೊಟ್ಟಿದ್ದು, ಎರಡನೇ ಜೊತೆ ಖರೀದಿಗೆ ಶಾಲಾ ಮುಖ್ಯಸ್ಥರ ಎಸ್​ಡಿಎಂಎಂಸಿ ಖಾತೆಗೆ ಹಣ ವರ್ಗಾಯಿಸಿರುವ ವಿಚಾರ ಬಹಿರಂಗವಾಯಿತು. ಇದರಿಂದ ತೀವ್ರ ಆಕ್ರೋಶಗೊಂಡ ನ್ಯಾಯಮೂರ್ತಿ ವೀರಪ್ಪ, ಸರ್ಕಾರ ಎರಡು ಜೊತೆ ಸಮವಸ್ತ್ರಕ್ಕೆ ಹಣ ಕಳುಹಿಸಿರುವುದಾಗಿ ಹೇಳುತ್ತಿದೆ. ಆದರೆ, ಇಲ್ಲಿ ಒಂದು ಜೊತೆಗೆ ಮಾತ್ರ ಇದೆ. ಬಹುಶಃ ಒಂದು ಜೊತೆಯಲ್ಲಿ ಒಂದು ಬಟ್ಟೆಯಿರುವುದಿಲ್ಲ. ಮೇಲಿನದ್ದು ಇದ್ದರೆ; ಕೆಳಗಿನದ್ದು ಇರುವುದಿಲ್ಲ. ಒಂದು ಕಾಲುಚೀಲ ಮತ್ತು ಒಂದು ಶೂಗೆ ಹಣ ಕಳುಹಿಸಿರಬೇಕು. ಫಲಾನುಭವಿ ಮಕ್ಕಳಿಗೆ ಸಮವಸ್ತ್ರ, ಶೂ-ಕಾಲು ಚೀಲ ಸಿಕ್ಕದೆಯೇ ಎಂಬುದು ದೇವರಿಗೆ ಮಾತ್ರ ಗೊತ್ತು ಎಂದು ಬೇಸರದಿಂದ ನುಡಿದರು.
ಇತ್ತಿಚೆಗೆ ಸರ್ಕಾರಿ ಶಾಲೆಯೊಂದಕ್ಕೆ ಭೇಟಿ ನೀಡಿದ್ದೆ. ಅಲ್ಲಿನ 520 ಮಕ್ಕಳಿಗೆ ಒಂದೇ ಒಂದು ಶೌಚಗೃಹವಿತ್ತು. ಅದರಲ್ಲೂ ಗಿಡಗಳು ಬೆಳೆದು ಹಾವು ಬರುತ್ತದೆ ಎಂಬ ಭಯದಿಂದ ಮಕ್ಕಳು ಅದನ್ನು ಬಳಸಲು ಹೆದರುತ್ತಿದ್ದರು. ಕೊನೆಗೆ ನಾವೇ ಅದನ್ನು ಸ್ವಚ್ಛಗೊಳಿಸಿದೆವು. ಇದು ದುರದೃಷ್ಟಕರ. ಇಂತಹ ಪರಿಸ್ಥಿತಿಯಿದ್ದರೆ ಸರ್ಕಾರಕ್ಕೆ ನಾಚಿಕೆ ಉಂಟು ಮಾಡುವುದಿಲ್ಲವೆ? ಉತ್ಸವ, ಮತ್ತಾವುದಕ್ಕೋ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತದೆ. ಮಕ್ಕಳ ಹಕ್ಕು, ಶಿಕ್ಷಣ ವಿಚಾರದಲ್ಲಿ ಸರ್ಕಾರ ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕಲ್ಲವೇ ಎಂದು ಪ್ರಶ್ನಿಸಿತು.
ಸಂಬಂಧಪಟ್ಟ ಅಧಿಕಾರಿಗಳಿಗೆ ಆತ್ಮಸಾಕ್ಷಿ ಇದ್ದರೆ ಕೂಡಲೇ ಮಕ್ಕಳಿಗೆ ಸಮವಸ್ತ್ರ, ಶೂ ಹಾಗೂ ಕಾಲು ಚೀಲ ವಿತರಿಸಬೇಕು. ರಾಜ್ಯ ಸರ್ಕಾರ ಕಣ್ಣು ತೆರೆಯಲು ಇದು ಸಕಾಲವಾಗಿದೆ. ಅಂತಿಮವಾಗಿ 2 ವಾರ ಕಾಲಾವಕಾಶ ನೀಡಲಾಗುವುದು. ಅಷ್ಟರಲ್ಲಿ ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಆರೋಪ ನಿಗದಿಪಡಿಸಲಾಗುತ್ತದೆ. ಅಂದು ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ತಿಳಿಸಿ ವಿಚಾರಣೆ ಮುಂದೂಡಿತ್ತು.
ಸಮವಸ್ತ್ರವಿಲ್ಲದಿದ್ದರೆ ಮಕ್ಕಳಿಗೆ ಬಹಳ ನೋವಾಗುತ್ತದೆ ಎನ್ನುವುದು ಅಧಿಕಾರಿಗಳಿಗೆ ಗೊತ್ತೇ, ಒಂದು ಬಾರಿ ಮಕ್ಕಳ ಮನಸ್ಸು ಹಾಳಾದರೆ ಜೀವನಪೂರ್ತಿ ಯಾತನೆಗೆ ಸಿಲುಕುತ್ತಾರೆ. ಅವರ ಶೈಕ್ಷಣಿಕ ಬದುಕನ್ನು ಹೀಗೆ ಮಾಡಿದರೆ ಕಥೆ ಏನು, ಕೊಡುವುದಾದರೆ ಸೂಕ್ತ ರೀತಿಯಲ್ಲಿ ಸಮವಸ್ತ್ರ ಕೊಡಿ. ಇಲ್ಲವಾದರೆ ಬೇಡ. ಪೂರ್ತಿಯಾಗಿ ಸಾಯಿಸಿಬಿಡಿ. ಅರ್ಧಂಬರ್ಧ ಸಾಯಿಸಬೇಡಿ. ಅಧಿಕಾರಿಗಳಿಗೆ ಸರ್ಕಾರಿ ಶಾಲೆ ಮಕ್ಕಳ ಬಗ್ಗೆ ಮಾನವೀಯತೆ ಇಲ್ಲ. ಅದೇ ಸಮಸ್ಯೆಯ ಮೂಲ. ಅವರ ಮಕ್ಕಳು ಸರ್ಕಾರಿ ಶಾಲೆಗೆ ಹೋಗುವುದಿಲ್ಲ. ಅಧಿಕಾರಿಗಳ ಮಕ್ಕಳು ಖಾಸಗಿ ಶಾಲೆಗೆ ಕಾರಿನಲ್ಲಿ ಹೋಗಿ, ಬರುತ್ತಾರೆ. ಮಕ್ಕಳ ವಿಚಾರದಲ್ಲಿ ಮಲತಾಯಿ ಧೋರಣೆಯನ್ನು ಸಹಿಸುವುದಿಲ್ಲ ಎಂದು ನ್ಯಾಯಪೀಠ ಕಟುವಾಗಿ ಹೇಳಿತ್ತು.
ದೂರು ದಾಖಲಿಸದಿರಲು 1 ಲಕ್ಷ ರೂ. ಲಂಚ! ಲೋಕಾಯುಕ್ತ ಬಲೆಗೆ ಬಿದ್ದ ದೇವದುರ್ಗ-ಮಾನ್ವಿ ಠಾಣೆಯ ಇನ್ಸ್​ಪೆಕ್ಟರ್​

ಪೆಟ್​ ಶಾಪ್​ಗೆ ಹೋಗಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದ ಇಂಜಿನಿಯರಿಂಗ್​ ವಿದ್ಯಾರ್ಥಿಗಳು! ವಿಡಿಯೋ ವೈರಲ್​

ಬಳ್ಳಾರಿಯಲ್ಲಿ ಸಹೋದರರ ಸವಾಲ್​! ಜನಾರ್ದನ ರೆಡ್ಡಿಗೆ ಸೋಮಶೇಖರ ರೆಡ್ಡಿ ಮಾತಿನ ಪಂಚ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − two =
Remember me
