ಬೆಂಗಳೂರು:ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಘೋಷಿಸಿದ್ದಾರೆ.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಟಾಕಿ ಮಾರಾಟ ಮಾಡುವ ಹಾಗೂ ದಾಸ್ತಾನು ಮಾಡುವ ಜಾಗದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯವಾಗಿ ಇಲ್ಲಿ ಸ್ಪೋಟಕ ಕಾಯ್ದೆ ಉಲ್ಲಂಘನೆಯಾಗಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣವನ್ನು ನಾವು ಸಿಐಡಿಗೆ ಹಸ್ತಾಂತರಿಸುತ್ತಿದ್ಧೇವೆ. ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ತಪ್ಪು ಮಾಡಿದವರು ಯಾರೇ ಆದರೂ ಅವರನ್ನು ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
#WATCH| After visiting the firecracker shop in Attibele where 14 people lost their lives due to fire, Karnataka CM Siddaramaiah says, "..There was a fire incident on October 7th…The place where the crackers were stocked and sold had no safety measures. Thus, there was a…pic.twitter.com/OdR7WBKBP7
ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಇದೊಂದು ಘೋರ ಘಟನೆಯಾಗಿದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಷಿಸುತ್ತೇವೆ. ಈಗಾಗಲೇ ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದ್ದು, ಸರ್ಕಾರ ವತಿಯಿಂದ ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ಧಾರೆ.
#WATCH| After visiting the firecracker shop in Attibele where 14 people lost their lives due to fire, Karnataka Dy CM D K Shivakumar says, "…It is a grave incident… We are going to come up with a plan of action we have to take within two to three days… We have already…pic.twitter.com/mCwu8Timrv
#WATCH| Karnataka CM Siddaramaiah and Deputy CM DK Shivakumar reach the accident site in Attibele where 14 people lost their lives after a fire broke out in a cracker shop yesterday.pic.twitter.com/BGOf6CDssS
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
