ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಮಂತ್ರಿಗಳು, ಕಾಂಗ್ರೆಸ್ ನಾಯಕ ವಿರುದ್ಧ ಸುಳ್ಳು ಮಾಹಿತಿ, ತಿರುಚಿದ ಫೋಟೋಗಳನ್ನು ಹಾಕುವವರ ಹೆಡೆಮುರಿ ಕಟ್ಟಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಇದನ್ನೂ ಓದಿ:ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಪಪ್ರಚಾರ ಮಾಡುವ ಹಾಗೂ ತಿರುಚಿದ ಫೋಟೋಗಳ ಮೂಲಕ ವಿಕೃತಿಯನ್ನುಂಟು ಮಾಡುವವರ ಸಂಖ್ಯೆಯನ್ನು ನಿಯಂತ್ರಿಸುವುದಕ್ಕಾಗಿ ಈ ತೀರ್ಮಾನಕ್ಕೆ ಬಂದಿದೆ ಎಂದು ಸರ್ಕಾರದ ಉನ್ನತ ಮೂಲಗಳು ಖಚಿತಪಡಿಸಿವೆ. ಸಾಮಾಜಿನ ಜಾಲತಾಣಗಳ ಮೇಲೆ ನಿಗಾ ಇರಿಸುವಂತೆ ಸೈಬರ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಾಯಕರು ಮಾತ್ರವಲ್ಲದೇ ಚುನಾವಣೆಯಲ್ಲಿ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಗೊಂದಲ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಜಾಲತಾಣಗಳ ದುರ್ಬಳಕೆ ಇನ್ನಷ್ಟು ಹೆಚ್ಚಾಗುತ್ತದೆ ಎಂದು ಮೂಲಗಳು ಹೇಳಿವೆ.
ಕಾಂಗ್ರೆಸ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಿದ ನಂತರ ಸಾಮಾಜಿಕ ಜಾಲತಾಣದ ದುರ್ಬಳಕೆ ಹೆಚ್ಚುತ್ತಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಆಕ್ಷೇಪಾರ್ಹ ಮತ್ತು ಆಧಾರ ರಹಿತ ಟೀಕೆ, ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದೇ ನಿಯಮ ಆಧರಿಸಿ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್
ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್‌, ಜಮೀರ್ ಅಹಮ್ಮದ್‌ ಖಾನ್‌, ಪಿಯಕೃಷ್ಣ ಸೇರಿ ಅನೇಕರು ಜತೆಯಲ್ಲಿ ಊಟ ಮಾಡುತ್ತಿದ್ದು, ಅವರ ತಟ್ಟೆಯಲ್ಲಿ ಸಸ್ಯಹಾರವಿತ್ತು. ಆದರೆ, ಈ ಫೋಟೋವನ್ನು ತಿರುಚಿ ಮಾಂಸಾಹಾರ ಸೇವನೆ ಮಾಡುತ್ತಿದ್ದಾರೆ. ಎಂಬ ರೀತಿಯಲ್ಲಿ ತಿರುಚಿ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಡಿ.ಕೆ. ಶಿವಕುಮಾರ್ ಟಿಪ್ಪು ಸಮಾಧಿಗೆ ನಮನ ಸಲ್ಲಿಸುತ್ತಿರುವ ಪೋಟೋ ಹರಿಯಬಿಡಲಾಗಿತ್ತು. ಇದು ಚರ್ಚೆಗೆ ಗುರಿಯಾಗಿತ್ತು.
ಸಿಐಡಿಯಲ್ಲಿರುವ ಸೈಬರ್ ವಿಭಾಗದಲ್ಲಿ ಪ್ರತ್ಯೇಕ ಇನ್ಸ್‌ಪೆಕ್ಟರ್ ಒಬ್ಬರನ್ನು ನೇಮಕ ಮಾಡಲಾಗುತ್ತದೆ. ಅವರು ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳನ್ನು ಗಮನಿಸಿ, ಸರ್ಕಾರದ ವಿರುದ್ಧ ಇರುವ ಪೋಸ್ಟ್‌ಗಳನ್ನು ಗಮನಿಸಬೇಕು. ಅವುಗಳ ಸೃಷ್ಟಿಕರ್ತರು, ಎಲ್ಲಿಂದ ಪೋಸ್ಟ್ ಆಗಿವೆ ಎಂಬುದನ್ನು ದೃಢಪಡಿಸಿಕೊಂಡು ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವ ಜವಾಬ್ದಾರಿ ನೀಡಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
