ಬೆಂಗಳೂರು:ಐದು ರಾಜ್ಯಗಳ ಜನರು ಕರ್ನಾಟಕ ಪ್ರವೇಶಿಸುವುದಕ್ಕೆ ನಿಷೇಧ ಹೇರಲು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನದಿಂದ ಬರುವ ವಿಮಾನಗಳ ಸಂಖ್ಯೆಯನ್ನು ಕಡಿಮೆ ಮಾಡುವುದಕ್ಕೆ ಮಾತ್ರ ರಾಜ್ಯ ಸಚಿಸ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:‘ವೊಡಾಫೋನ್​ ಐಡಿಯಾ’ ಮೇಲೆ ಸರ್ಚಿಂಗ್​ ದೈತ್ಯ ‘ಗೂಗಲ್​​’ ಕಣ್ಣು; ಶೀಘ್ರವೇ ನಿರ್ಧಾರ ಪ್ರಕಟ?
ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ವಿಮಾನ ಯಾನ ಸಚಿವಾಲಯಕ್ಕೆ ಮನವಿ ಮಾಡಿದೆ. ಹೆಚ್ಚು ಜನ ಬಂದರೆ ಕ್ವಾರಂಟೈನ್ ಸೌಲಭ್ಯ ನೀಡಲು ಸಾಧ್ಯವಾಗುವುದಿಲ್ಲ ಎಂಬ ಸದುದ್ದೇಶ ಇದರ ಹಿಂದೆ ಇದೆ ಎಂದು ತಿಳಿಸಿದ್ದಾರೆ.
ಇದಕ್ಕೆ ಮುನ್ನ ಸಚಿವ ಸಂಪುಟ ಸಭೆ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಈ ಐದು ರಾಜ್ಯಗಳಿಂದ ಜನರು ವಿಮಾನ ಮತ್ತು ರಸ್ತೆ ಮೂಲಕ ಬರುವುದನ್ನು ತಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಇದು ದೇಶಾದ್ಯಂತ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿ ಬಿತ್ತರವಾಗಿತ್ತು.
ಇದನ್ನೂ ಓದಿ:2500ರ ಗಡಿದಾಟಿದ ಕರೊನಾ ಸೋಂಕಿತರ ಸಂಖ್ಯೆ; ಒಂದೇ ದಿನದಲ್ಲಿ 53ಮಂದಿ ಡಿಸ್​ಚಾರ್ಜ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 4 =
Remember me
