ಹಾಸನ:ಮೈಸೂರು ದಸರಾ ಸಮಯದಲ್ಲಿ 8 ಬಾರಿ ಅಂಬಾರಿ ಹೊತ್ತು ನಾಡದೇವತೆ ಚಾಮುಂಡೇಶ್ವರಿಯನ್ನು ಮೆರೆಸಿದ್ದ ಅರ್ಜುನ ಆನೆ ಸೋಮವಾರ (ಡಿ.5) ಮೃತಪಟ್ಟಿದೆ. ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನನಿಗೆ ಒಂಟಿ ಸಲಗವೊಂದು ಕಿಬ್ಬೊಟ್ಟೆಗೆ ತಿವಿದಿದ್ದರಿಂದ ಅರ್ಜುನ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗುತ್ತಿದ್ದರೂ ಅರ್ಜುನ ಸಾವಿನ ಬಗ್ಗೆ ಮಾವುತರೊಬ್ಬರು ನೀಡಿದ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟಿಸಿದೆ.
ಹೌದು, ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ದಾಳಿ ಮಾಡಿದ್ದರಿಂದ ಸಾವಾಗಿದೆ ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದೆ.
ಗುರಿ ತಪ್ಪಿ ಬಿದ್ದ ಅದೊಂದು ಗುಂಡೇಟಿನಿಂದ ಶಕ್ತಿ ಕಳೆದುಕೊಂಡು ಕಾದಾಡಲಾಗದೆ ಅರ್ಜುನ ಆನೆ ಮೃತಪಟ್ಟಿದೆ ಎನ್ನಲಾಗುತ್ತಿದೆ. ಮದದಲ್ಲಿರುವ ಕಾಡಾನೆ ಹುಚ್ಚನಂತೆ ಆಡುತ್ತದೆ ಎಂಬ ಮಾಹಿತಿ ಗೊತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ತಪ್ಪು ನಿರ್ಧಾರ ಮಾಡಿದ್ದಾರೆ ಎಂಬ ಬಗ್ಗೆ ತಜ್ಞರು ಟೀಕೆ ಮಾಡಿದ್ದಾರೆ.
ಗುಂಡೇಟಿಗೆ ಪ್ರಾಣ ಕಳೆದುಕೊಂಡನೇ ಅರ್ಜುನ?ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳದಲ್ಲಿದ್ದ ಆನೆ ಮಾವುತರೊಬ್ಬರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಅರ್ಜುನ ಆನೆ ಮೊದಲ‌ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತು. ಅರ್ಜುನ ಶಕ್ತಿ ಕಳೆದುಕೊಂಡ. ನಾವು ಆನೆ ಮೇಲಿಂದ ಇಳಿದು ಓಡಿದೆವು. ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ಸಾಕಾನೆ ಅರ್ಜುನನ ಮೇಲೆ ಹಠಾತ್ ದಾಳಿ ಮಾಡಿತು ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದ್ದು, ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕಿದೆ.
ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆವೀರ ಮರಣ ಹೊಂದಿದ ಅರ್ಜುನನಿಗೆ ಇಂದು ಬೆಳಗ್ಗೆ 11 ಗಂಟೆ ಬಳಿಕ ಸಕಲ ಸರ್ಕಾರಿ ಗೌರವ ಹಾಗು ರಾಜ ಮರ್ಯಾದೆಯೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಸಮೀಪದ ನೆಡುತೋಪಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರು ಅರಮನೆಯ ರಾಜ ವಂಶಸ್ಥರೂ ಅರ್ಜುನನಿಗೆ ಅಂತಿಮ ಗೌರವ ಸಲ್ಲಿಸಲಿದ್ದಾರೆ. ಅರಮನೆಯ ಪೊರೋಹಿತರು ಅಂತಿಮ ವಿಧಿ ವಿಧಾನ ನೆರವೇರಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
