ಬೆಂಗಳೂರು:ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2021ರ ಡಿಸೆಂಬರ್ ಅಂತ್ಯದವರೆಗೆ ಮುಂದೂಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಬಗ್ಗೆ ಸಮರ್ಥನೆ ನೀಡಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಅವಧಿ ಪೂರ್ಣಗೊಂಡಿರುವ ರಾಜ್ಯದ ಕೆಲ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರ್ಕಾರ, ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು. ಸರ್ಕಾರದ ಪರ ವಕೀಲರು ಹಾಜರಾಗಿ, ಕೋವಿಡ್ 2ನೇ ಅಲೆ ಉಲ್ಬಣಿಸಿದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2021ರ ಡಿಸೆಂಬರ್ ಅಂತ್ಯದವರೆಗೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಮೇ 17ರಂದು ಸಂಪುಟ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿ, ಆ ಕುರಿತ ದಾಖಲೆಗಳನ್ನು ನ್ಯಾಯಪೀಠಕ್ಕೆ ಒದಗಿಸಿದರು.
ಹೈಕೋರ್ಟ್ ಪ್ರಶ್ನೆ
ಕೋವಿಡ್ ನೆಪ ನೀಡಿ ಚುನಾವಣೆ ಮುಂದೂಡಲು ಸರ್ಕಾರ ನಿರ್ಧರಿಸಿದೆ. ಧಾರ್ವಿುಕ ಕೇಂದ್ರಗಳಿಗೆ ಜನ ಹೋಗಬಹುದು, ಮತಗಟ್ಟೆಗಳಿಗೆ ಹೋಗುವಂತಿಲ್ಲವೇ? ಸಂಪುಟ ನಿರ್ಣಯ ಕೈಗೊಂಡ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪರಿಸ್ಥಿತಿ ಸಾಕಷ್ಟು ಸುಧಾರಿಸಿದ್ದು, ಬಹುತೇಕ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಧಾರ್ವಿುಕ ಸ್ಥಳಗಳು, ಶಾಪಿಂಗ್ ಮಾಲ್​ಗಳು ಇನ್ನಿತರ ಚಟುವಟಿಕೆ ಆರಂಭಿಸಲಾಗಿದೆ. ಹೀಗಿರುವಾಗ ಚುನಾವಣೆ ನಡೆಸಲು ಏಕೆ ಸಾಧ್ಯವಿಲ್ಲ, ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕೆಂಬ ಸಾಂವಿಧಾನಿಕ ಬಾಧ್ಯತೆಯಿಂದ ಕರ್ನಾಟಕ ಅತೀತವಾಗಿದೆಯೇ?
ವೇಳಾಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಿ
ಇದಕ್ಕೂ ಮುನ್ನ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಹಾಜರಾಗಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಗಳು ಹಾಗೂ ದೊಡ್ಡಬಳ್ಳಾಪುರ ನಗರಸಭೆ ಮತ್ತು ತರೀಕೆರೆ ಪುರಸಭೆ ಚುನಾವಣೆಗೆ ವೇಳಾಪಟ್ಟಿ ನಿಗದಿಪಡಿಸುವ ಸಂಬಂಧ ಜು.28ರಂದು ಸಭೆ ನಡೆಸಲಾಗಿದೆ. ಆದರೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದರು. ನ್ಯಾಯಪೀಠ ಪ್ರತಿಕ್ರಿಯಿಸಿ, ಈಗಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾಯಿತ ಅವಧಿ ಪೂರ್ಣಗೊಂಡಿದೆ. ಸಂವಿಧಾನದ ಪರಿಚ್ಛೇದ 243(ಯು) ಪ್ರಕಾರ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕೆಂದು ಈ ಹಿಂದೆಯೇ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಆದ್ದರಿಂದ, ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿತು. ಚುನಾವಣೆಗಳನ್ನು ಮುಂದೂಡುವ ಸಂಬಂಧ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಚುನಾವಣಾ ಆಯೋಗ ಬದ್ಧವಾಗಿರಬೇಕೆಂದೇನೂ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಪೀಠ, ಆದಷ್ಟು ಶೀಘ್ರ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಸಂಬಂಧ ಆಯೋಗ ನಿರ್ಧಾರ ಕೈಗೊಳ್ಳಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಆ.13ಕ್ಕೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
