ಬೆಂಗಳೂರು:ನಟ, ನಿರ್ದೇಶಕ ಉಪೇಂದ್ರ ವಿರುದ್ಧದ ಜಾತಿ ನಿಂದನೆ(Attrocity) ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ FIRಗೆ ರಾಜ್ಯ ಹೈ ಕೋರ್ಟ್​ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ FIR ರದ್ದುಪಡಿಸುವಂತೆ ಕೋರಿ ನಟ ಉಪೇಂದ್ರ ಹೈಕೋರ್ಟ್​ ಮೆಟ್ಟಿಲೇರಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್​ ಚಂದನ್​ಗೌಡರ್​ ಅವರಿದ್ದ ಏಕಸದಸ್ಯ ಪೀಠವು ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ FIRಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ನಟ ಉಪೇಂದ್ರ ಪರ ವಾದ ಮಂಡಿಸಿದ ವಕೀಲ ಉದಯ್​ ಹೊಳ್ಳ ತಮ್ಮ ಕಕ್ಷಿದಾರರು ತಾವು ಆಡಿರುವ ಮಾತುಗಳಿಗೆ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಆ ವಿಡಿಯೋವನ್ನು ಸಹ ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲ.
ಇದನ್ನೂ ಓದಿ:ಬಗೆದಷ್ಟೂ ಬಯಲಾಗುವ BJPಯ ಎಲ್ಲಾ ಭ್ರಷ್ಟಾಚಾರಗಳನ್ನೂ ನಮ್ಮ ಸರ್ಕಾರ ತನಿಖೆಗೆ ಒಳಪಡಿಸಲಿದೆ: ಕಾಂಗ್ರೆಸ್​
ಈ ಪ್ರಕರಣದಲ್ಲಿ ಎಸ್ಸಿ-ಎಸ್ಟಿ‌ ಕಾಯ್ದೆ ಅನ್ವಯಿಸದ ಕಾರಣ ಎಫ್ಐಆರ್ ದಾಖಲಿಸಿ ತನಿಖೆ ಮಾಡುತ್ತಿರುವುದು ಸರಿಯಲ್ಲ. ಕೇವಲ ಗಾದೆ ಮಾತನ್ನು ಉಲ್ಲೇಖ ಮಾಡಿದ್ದಾರೆ. ಬೇರೆ ಯಾವುದೋ ವಿಚಾರವನ್ನು ಹೇಳಬೇಕಾದರೆ ಗಾದೆ ಮಾತನ್ನು ಬಳಸಿದ್ದಾರೆ. ಈ ಪ್ರಕರಣದಲ್ಲಿ ದುರುದ್ದೇಶ ಕಾಣುತ್ತಿದ್ದು, ಪೊಲೀಸ್​ ಅಧಿಕಾರಿಗಳು ಮನೆ ಮಹಜರ್​ ಹೆಸರಿನಲ್ಲಿ ತಮ್ಮ ಕಕ್ಷಿದಾರರಿಗೆ ಕಿರುಕುಳ ನೀಡುತ್ತಿದ್ದಾರೆ.
ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕೆಂದು ಕೋರಿ ನಟ ಉಪೇಂದ್ರ ಪರ ವಕೀಲ ಉದಯ್​ ಹೊಳ್ಳ ವಾದ ಮಂಡಿಸಿದ್ದಾರೆ. ನಟ ಉಪೇಂದ್ರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿಗಳು ಪ್ರಕರಣ ಸಂಬಂಧ ದಾಖಲಾಗಿರುವ FIRಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:13 − four =
Remember me
