ಬೆಂಗಳೂರು:ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳ ಅಡಿಯಲ್ಲಿ ವ್ಯಕ್ತಿಗತವಾಗಿ ಹಲವು ಖಾತೆಗಳನ್ನು ನಿಷೇಧಿಸುವ ಬಗ್ಗೆ ಹೊರಡಿಸಲಾಗಿರುವ ಆದೇಶ ಪ್ರಶ್ನಿಸಿ ಟ್ವಿಟರ್ ಸಂಸ್ಥೆ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ಆದೇಶ ಪ್ರಶ್ನಿಸಿ ‘ಟ್ವಿಟರ್ ಇನ್‌ಕಾರ್ಪೊರೇಟೆಡ್’ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ವಾದ ಆಲಿಸಿದ ಪೀಠ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತದರ ನಿಯೋಜಿತ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿತು. ಜತೆಗೆ, ಅರ್ಜಿದಾರರು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ಗೌಪ್ಯ ದಾಖಲೆಯನ್ನು ಜೋಪಾನವಾಗಿ ಇಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದ ಪೀಠ, ಇಂಥದ್ದೇ ಮತ್ತೊಂದು ಮುಚ್ಚಿದ ಲಕೋಟೆಯಲ್ಲಿರುವ ದಾಖಲೆಯನ್ನು ಪ್ರತಿವಾದಿಗಳಿಗೆ ಒದಗಿಸುವಂತೆ ಅರ್ಜಿದಾರರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ವಾದವೇನು?ಇದಕ್ಕೂ ಮುನ್ನ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಅಶೋಕ್ ಹಾರನಹಳ್ಳಿ ಹಾಗೂ ಮುಕುಲ್ ರೋಹಟ್ಗಿ, ಟ್ವಿಟರ್‌ನಲ್ಲಿ ವ್ಯಕ್ತಿಗತವಾಗಿ ಹೊಂದಿರುವ ಸಾವಿರಾರು ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಮಾಡಿದೆ. ಕಾನೂನಿನ ಅನ್ವಯ ಸರ್ಕಾರದ ಆದೇಶವನ್ನು ನಾವು ಪಾಲಿಸಬೇಕಿದೆ. ಆದರೆ, ಟ್ವಿಟರ್ ಹ್ಯಾಂಡಲ್ ನಿರ್ಬಂಧವಾದದ್ದಕ್ಕೆ ವ್ಯಕ್ತಿಗತವಾಗಿ ಬಳಕೆದಾರರಿಗೆ ಯಾವುದೇ ಆಶ್ರಯ ಅಥವಾ ಪರಿಹಾರ ಇರುವುದಿಲ್ಲ. ಇದರಿಂದ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂದು ವಿವರಿಸಿದರು.
ನಿರ್ಬಂಧ ಆದೇಶ ಮತ್ತದರ ಜಾರಿಯು ಗೌಪ್ಯವಾಗಿರಬೇಕು ಎಂದು ಹೇಳಲಾಗಿರುವುದರಿಂದ ನಾವು ಅದನ್ನು ಬಹಿರಂಗಪಡಿಸಿಲ್ಲ. ಈ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಸಾವಿರಕ್ಕೂ ಅಧಿಕ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವಂತೆ ಆದೇಶಿಸಿರುವ ಸರ್ಕಾರ, ಇದಕ್ಕೆ ಯಾವುದೇ ಸಕಾರಣ ನೀಡಿಲ್ಲ. ಆದರೆ, ಟ್ವಿಟರ್ ಖಾತೆಯನ್ನು ನಿರ್ಬಂಧಿಸಿದರೆ ನಾವು ಬಳಕೆದಾರರಿಗೆ ಉತ್ತರಿಸಬೇಕಾಗುತ್ತದೆ ಎಂದರು.
ಆ.25ಕ್ಕೆ ವಿಚಾರಣೆ ಮುಂದೂಡಿಕೆ:ಅರ್ಜಿದಾರರ ವಾದ ಆಲಿಸಿದ ಪೀಠ, ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಲಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋವಿಡ್ ಸೋಂಕಿಗೆ ತುತ್ತಾಗಿರುವ ಹಿನ್ನೆಲೆಯಲ್ಲಿ 2 ವಾರಗಳ ಬಳಿಕ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ರೋಹಟ್ಗಿ, ಸಾಲಿಸಿಟರ್ ಜನರಲ್ ಕೋವಿಡ್ ಸೋಂಕಿಗೆ ತುತ್ತಾಗಿರುವ ವಿಚಾರ ತಿಳಿದಿದೆ. ಆ. 25ರಂದು ನಾನು ಬೆಂಗಳೂರಿಗೆ ಬರುತ್ತಿದ್ದು, ಅಂದೇ ಈ ಪ್ರಕರಣದ ವಿಚಾರಣೆಯನ್ನೂ ಮುಗಿಸಿಕೊಳ್ಳುತ್ತೇನೆ. ಇದಕ್ಕೆ ಅನುಮತಿ ನೀಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ವಿಚಾರಣೆಯನ್ನು ಆ.25ಕ್ಕೆ ಮುಂದೂಡಿತು.
ಪ್ರಕರಣವೇನು?ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ-2000ದ ಸೆಕ್ಷನ್ 69ಎ ಅಡಿಯಲ್ಲಿ 2021ರ ವಿವಿಧ ದಿನಾಂಕಗಳಲ್ಲಿ ಹಲವು ನೋಟಿಸ್ ನೀಡಿರುವ ಕೇಂದ್ರ ಸರ್ಕಾರ 1,474 ಟ್ವಿಟರ್ ಖಾತೆಗಳು ಹಾಗೂ 175 ಟ್ವೀಟ್‌ಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಆದೇಶಿಸಿದೆ. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಕೇಂದ್ರದ ಆದೇಶದಿಂದ ಬಳಕೆದಾರರ ಹಕ್ಕುಗಳ ಉಲ್ಲಂಘನೆ ಆಗಲಿದೆ. ಯಾವ ಕಾರಣಕ್ಕಾಗಿ ಖಾತೆಗಳನ್ನು ನಿರ್ಬಂಧಿಸಬೇಕು ಮತ್ತು ಅದರ ಅಗತ್ಯವೇನಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ವಿವರಿಸಿಲ್ಲ. ಇದು ಏಕಪಕ್ಷೀಯ ನಿರ್ಧಾರವಾಗಿದ್ದು, ಐಟಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದೆ.
VIDEO: ಎಲ್ಲೂ ನೋಡಿರದ ಪ್ರಕೃತಿಯ ಅಪರೂಪದ ಕ್ಷಣ: ಕಣಿವೆಗಳ ಮೇಲೆ ತೇಲುತ್ತಿರುವ ಮೋಡಗಳ ದೃಶ್ಯ ಹಂಚಿಕೊಂಡ ಸಚಿವ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + four =
Remember me
