ಬೆಂಗಳೂರು:ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಆಸ್ತಿ ಜಪ್ತಿ ವಿಚಾರದಲ್ಲಿ ಸಿಬಿಐ ವರದಿ ಸಲ್ಲಿಕೆಗೂ ಮುನ್ನ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ನಿಲುವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಶನಿವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.
ರೋಷನ್ ಬೇಗ್ ವಿರುದ್ಧದ ಸಿಬಿಐ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಈ ಹಂತದಲ್ಲಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ ಎಂಬ ಸರ್ಕಾರದ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಪ್ರಕರಣದಲ್ಲಿ ಸರ್ಕಾರ ತನ್ನ ಅಧಿಕಾರ ಬಳಸುತ್ತಿಲ್ಲ. ಆಸ್ತಿ ಜಪ್ತಿಗೆ ಐಎಂಎ ಹಾಗೂ ರೋಷನ್ ಬೇಗ್ ನಡುವಿನ ವ್ಯವಹಾರ ಕುರಿತು ಸಿಬಿಐ ವರದಿಗಾಗಿ ಕಾಯುತ್ತಾ ಕೂರುವ ಅಗತ್ಯವಿಲ್ಲ. ಐಎಂಎ ಕುರಿತ ಆಡಿಟ್ ಆಧರಿಸಿ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಬಹುದು ಎಂದು ಅಭಿಪ್ರಾಯಪಟ್ಟಿತು.
ಪ್ರಕರಣದಲ್ಲಿ ಸಿಬಿಐ ಅಂತಿಮ ವರದಿ ಸಲ್ಲಿಸುವವರೆಗೆ ಸರ್ಕಾರ ಕಾಯುವ ಅಗತ್ಯವಿಲ್ಲ. ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತರಕ್ಷಣಾ (ಕೆಪಿಐಡಿಎಫ್​ಇ) ಕಾಯ್ದೆಯ ಸೆಕ್ಷನ್ 3ರ ಅಡಿ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡುವ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಮಾ.13ರಂದೇ ಹೈಕೋರ್ಟ್ ಆದೇಶಿಸಿದೆ. ಆ ಆದೇಶದ ಅನುಸಾರ ಕ್ರಮ ಕೈಗೊಳ್ಳಲು ಸರ್ಕಾರ ತನ್ನ ನಿಲುವನ್ನು 3 ತಿಂಗಳಲ್ಲಿ ಮರುಪರಿಶೀಲಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.
ವಸ್ತುಸ್ಥಿತಿ ವರದಿ ಸಲ್ಲಿಕೆ: ಐಎಂಎ ಹಗರಣದಲ್ಲಿ ಸಕ್ಷಮ ಪ್ರಾಧಿಕಾರವಾಗಿ ನೇಮಕಗೊಂಡಿರುವ ಹರ್ಷಗುಪ್ತಾ ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿದರು. ಈವರೆಗೆ 3,473 ಠೇವಣಿದಾರರ ಖಾತೆಗಳಿಗೆ ಒಟ್ಟು 5.58 ಕೋಟಿ ರೂ. ಹಣ ವರ್ಗಾಯಿಸಲಾಗಿದೆ. ಸಂಸ್ಥೆಯ ಬಾಕಿ ಆಸ್ತಿಗಳನ್ನು ವಿಶೇಷ ನ್ಯಾಯಾಲಯ ಸಂಪೂರ್ಣವಾಗಿ ಜಪ್ತಿ ಮಾಡಿದ ನಂತರ ಹಣ ಲಭ್ಯವಾದಂತೆ ಹೆಚ್ಚುವರಿ ಠೇವಣಿದಾರರಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ವರದಿಯಲ್ಲಿ ಹೇಳಲಾಗಿದೆ.
ಐಎಂಎ ಸಂಸ್ಥೆಯಲ್ಲಿ ಚಿನ್ನ ಅಡಮಾನವಿಟ್ಟು ಹಣ ಪಡೆದವರ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದೆ. ಈ ವೇಳೆ ಜಪ್ತಿ ಮಾಡಲಾಗಿರುವ ಚಿನ್ನದ ಭೌತಿಕ ಪರಿಶೀಲನೆ ಸಹ ನಡೆಸಲಾಗಿದೆ. ಅವರ ಕ್ಲೇಮುಗಳನ್ನು ವಿಶೇಷ ನ್ಯಾಯಾಲಯದ ಆದೇಶದ ನಂತರ ಹಣ ಹಿಂತಿರುಗಿಸಲಾಗುವುದು. ಶಿವಾಜಿನಗರದ ವಿಕೆ ಒಬೇದುಲ್ಲಾ ಸರ್ಕಾರಿ ಶಾಲೆಗೆ ಐಎಂಎ ಸಂಸ್ಥೆ ನೀಡಿರುವ 12.82 ಕೋಟಿ ರೂ.ಗಳನ್ನು ಮುಟ್ಟಗೋಲು ಹಾಕಿಕೊಳ್ಳುವ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರ ಹಣ ಬಿಡುಗಡೆಗೆ ಮನವಿ ಮಾಡಲಾಗಿದೆ. ಆ ಹಣ ಕೈ ಸೇರಿದರೆ ಠೇವಣಿದಾರರಿಗೆ ಹಣ ಹಿಂದಿರುಗಿಸಲು ಸಹಾಯವಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ವೇದಿಕೆ ಮೇಲೇ ಸಚಿವ-ಶಾಸಕರ ಜಟಾಪಟಿ; ಮೂಕಪ್ರೇಕ್ಷಕರಾದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + seventeen =
Remember me
