ಬೆಂಗಳೂರು:2023-24ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1 ಫಲಿತಾಂಶವನ್ನು ನಾಳೆ (ಬುಧವಾರ) ಏಪ್ರಿಲ್ 10 ಬಿಡುಗಡೆಯಾಗಲಿದೆ.
ಇದನ್ನೂ ಓದಿ:ಮಾನವೀಯತೆ ಮರೆತು ಬಿಟ್ರಾ ಮೆಟ್ರೋ ಸಿಬ್ಬಂದಿ: ಕಾರ್ಮಿಕನನ್ನು ಮೆಟ್ರೋದೊಳಗೆ ಬಿಡದೆ ಅವಮಾನ!
ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು, ಮಾರ್ಚ್ 2024ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1 ವಾರ್ಷಿಕ ಪರೀಕ್ಷೆಯನ್ನು ದಿನಾಂಕ 01-03-2024 ರಿಂದ 22-03-2024ರವರೆಗೆ ನಡೆಸಲಾಯಿತು.
ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.
ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಗ್ಗೆ 10 ಗಂಟೆಯ ನಂತರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪಡೆಯಬಹುದಾಗಿದೆ ಎಂದು ತಿಳಿಸಿದೆ.
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯದ್ಯಾಂತ ಒಟ್ಟು 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈಗ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಅಂಕಗಳನ್ನು ಕಂಪ್ಯೂಟರೀಕರಣಗೊಳಿಸಲಾಗಿದೆ.
ನಟಿ ಸಮಂತಾಗೆ 30, 40 ಅದೆಷ್ಟೇ ವಯಸ್ಸಾದ್ರೂ ಆಕೆ…. ಶಾಕಿಂಗ್ ಹೇಳಿಕೆ ನೀಡಿದ ಸ್ಟಾರ್​ ಡೈರೆಕ್ಟರ್!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 − 3 =
Remember me
