ಬೆಂಗಳೂರು:ಗ್ರಾಮೀಣ ಪ್ರದೇಶಗಳ ಜನರ ನರ ಸಂಬಂಧಿ, ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಕೌನ್ಸೆಲಿಂಗ್ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾನಸಿಕ ಅನಾರೋಗ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.
‘COMHAD-2022 ಮೂರನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಈ ವಿಷಯವನ್ನು ತಿಳಿಸಿದರು. ಮಾನಸಿಕ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಗಳನ್ನು ವಹಿಸುತ್ತಿದೆ. ನಿಮ್ಹಾನ್ಸ್‌ ಸಹಯೋಗದಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಸ್ಥೆಯ ಸಹಯೋಗದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎಂಬಿಬಿಎಸ್‌ ವೈದ್ಯರಿಗೆ ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತಿದೆ. ಇವರು ಗ್ರಾಮೀಣ ಜನರ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕೌನ್ಸೆಲಿಂಗ್​ ಮೊದಲಾದ ಕ್ರಮಗಳ ಮೂಲಕ ಪರಿಹಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಮಾನಸಿಕ ಅನಾರೋಗ್ಯ ಇಂದಿನ ಸಮಾಜದ ಪ್ರಮುಖ ಆರೋಗ್ಯ ಸಮಸ್ಯೆಯೂ ಆಗಿದೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಕರ್ಯ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ, ‘ಬ್ರೇನ್​ ಹೆಲ್ತ್‌ ಇನಿಷಿಯೇಟಿವ್‌ʼ ಎಂಬ ಕಾರ್ಯಕ್ರಮವನ್ನು ಕರ್ನಾಟಕ ಮೊದಲ ಬಾರಿಗೆ ಜಾರಿ ಮಾಡಿದೆ. ಇದರ ಪ್ರೇರಣೆಯಿಂದಾಗಿಯೇ ಕೇಂದ್ರ ಸರ್ಕಾರದ ಮಟ್ಟದಲ್ಲಿ ಇದೇ ಮಾದರಿಯ ಮಾನಸಿಕ ಆರೋಗ್ಯ ಕಾರ್ಯಕ್ರಮ ಜಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸಮ್ಮೇಳನದಲ್ಲಿ ಚರ್ಚೆಯಾದ ವಿಚಾರಗಳನ್ನು ಆರೋಗ್ಯ ಇಲಾಖೆಗೆ ನೀಡಿದರೆ, ಈ ಬಗ್ಗೆ ಚರ್ಚಿಸಲಾಗುವುದು. ಇದು ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಲಿದೆ.|ಡಾ.ಕೆ.ಸುಧಾಕರ್, ಆರೋಗ್ಯ ಸಚಿವ
ಮಾನಸಿಕ ಒತ್ತಡ, ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿಯ ಬದಲಾವಣೆ, ನಿದ್ದೆಯಲ್ಲಿ ವ್ಯತ್ಯಾಸ ಸೇರಿ ಹಲವಾರು ಕಾರಣಗಳಿಂದಾಗಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಅದರಲ್ಲೂ, ಯುವಜನರಲ್ಲಿ ಹಾಗೂ ವೃದ್ಧರಲ್ಲಿ ಒಂದಲ್ಲ ಒಂದು ಬಗೆಯ ಮಾನಸಿಕ ಅನಾರೋಗ್ಯ ಕಂಡುಬರುತ್ತಿದೆ. ಆದ್ದರಿಂದ ಈ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ ಎಂದರು.
ನರಸಂಬಂಧಿ ರೋಗಗಳಿಂದಾಗಿ ಆರೋಗ್ಯ ಕ್ಷೇತ್ರದ ಮೇಲೆ ಹೊರೆ ಹೆಚ್ಚುತ್ತಿದೆ. ಇದು ಆರೋಗ್ಯ ವಲಯಕ್ಕೆ ದೊಡ್ಡ ಸವಾಲಾಗಿದೆ. ಇದು ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತಿದೆ. ಕರ್ನಾಟಕದಲ್ಲಿ ನರಸಂಬಂಧಿ ಸಮಸ್ಯೆ, ಮೂರ್ಛೆ ಹಾಗೂ ಪಾರ್ಶ್ವವಾಯು ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದೆ. ಬಾಲ್ಯದಲ್ಲೇ ಮಕ್ಕಳು ಅಂಗವಿಕಲರಾಗಲು ಇರುವ ಕಾರಣಗಳಲ್ಲಿ ನರಸಂಬಂಧಿ ಸಮಸ್ಯೆಗಳೇ ಶೇ.70 ಪಾಲು ಹೊಂದಿವೆ. ಈ ಬಗ್ಗೆ ಶಾಲಾ ಮಕ್ಕಳಲ್ಲಿ, ವಯಸ್ಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇಂತಹ ಸಮ್ಮೇಳನದ ಮೂಲಕ ಸಮಸ್ಯೆಗಳಿಗೆ ಹೊಸ ಉತ್ತರ ದೊರೆಯಲಿದೆ. ಇದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆಯಾಗಿ ನೀಡಿದ ಭಿಕ್ಷುಕಿ; 20 ವರ್ಷಗಳಿಂದ ಅದೇ ದೇವಳದ ಮುಂದೆ ಭಿಕ್ಷೆ ಬೇಡುತ್ತಿದ್ದ ವೃದ್ಧೆ

ಭಿಕ್ಷೆ ಬೇಡುತ್ತಿದ್ದ ಹತ್ತು ವರ್ಷದ ಬಾಲಕ ಈಗ ಕೋಟ್ಯಧಿಪತಿ!; ಆಗಿದ್ದು ಹೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − nine =
Remember me
