ಕೊಡಗು:ಇತ್ತೀಚೆಗೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದ ಸರ್ಕಾರ, ಇದೀಗ ಕರ್ನಾಟಕ ಕೊಡವ ಅಭಿವೃದ್ಧಿ ನಿಗಮವನ್ನೂ ಸ್ಥಾಪನೆ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡವ ಸಮುದಾಯಕ್ಕೆ ನೀಡಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ.
ಇದನ್ನೂ ಓದಿ:ವಿಮಾನದಲ್ಲೇ ಹೃದಯಾಘಾತ; ಆಕಾಶದಲ್ಲೇ ಹಾರಿಹೋದ ಪ್ರಾಣಪಕ್ಷಿ
ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡುವುದಾಗಿ ಕೊಡಗಿನಲ್ಲಿ ಮಾ.18ರಂದು ನಡೆದಿದ್ದ ಕೊಡವ ಕೌಟುಂಬಿಕ ಹಾಕಿ ಉತ್ಸವದಲ್ಲಿ ಭರವಸೆ ನೀಡಿದ್ದ ಬಸವರಾಜ ಬೊಮ್ಮಾಯಿ, ಅದರಂತೆಯೇ ನಡೆದುಕೊಂಡಿದ್ದು, ಇಂದು ಸರ್ಕಾರದಿಂದ ಆದೇಶವನ್ನು ಕೂಡ ಹೊರಡಿಸಿದ್ದಾರೆ.
ಇದನ್ನೂ ಓದಿ:ಮನೆ ಮುಂದೆ ಕಾರು ನಿಲ್ಲಿಸುತ್ತಾನೆಂದು ಜೀವವನ್ನೇ ತೆಗೆದ ದಾಯಾದಿಗಳು!
ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಬೇಕು ಎಂಬುದಾಗಿ ಶಾಸಕ ಕೆ.ಜಿ.ಬೋಪಯ್ಯ ಅವರು ಬೇಡಿಕೆ ಇಟ್ಟಿದ್ದರು. ಅವರು ಯುಕೋ ಸಂಘಟನೆಯ ಮೂಲಕ ಮನವಿ ಮಾಡಿದ್ದರು. ಆ ಮೇರೆಗೆ ಇಂದು ನಿಗಮ ಸ್ಥಾಪನೆಯ ಅಧಿಕೃತ ಆದೇಶ ಹೊರಬಿದ್ದಿದೆ. ಕೊಡವರ ಮನವಿಗೆ ಸ್ಪಂದಿಸಿ ನಿಗಮ ಸ್ಥಾಪನೆ ಮಾಡಿದ್ದಕ್ಕಾಗಿ ಜಿಲ್ಲೆಯ ಜನತೆಯ ಪರವಾಗಿ ಮುಖ್ಯಮಂತ್ರಿಯವರಿಗೆ ಕೆ.ಜಿ. ಬೋಪಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
