ಬೆಂಗಳೂರು:ಡಿಜಿಟಲ್ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿ ಜಾರಿಗೊಳಿಸಿರುವ ಕರ್ನಾಟಕ ಲರ್ನಿಂಗ್ ಮ್ಯಾನೇಜ್​ವೆುಂಟ್ ಸಿಸ್ಟಮ್​ (ಎಲ್​ಎಂಎಸ್)ಗೆ ಸೋಮವಾರ ಚಾಲನೆ ಸಿಕ್ಕಿತು. ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇದಕ್ಕೆ ಚಾಲನೆ ನೀಡಿ, ಇದರಿಂದ ಉನ್ನತ ಶಿಕ್ಷಣದ ಗುಣಮಟ್ಟ ವರ್ಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉನ್ನತ ಶಿಕ್ಷಣ ಇಲಾಖೆ ಈ ವ್ಯವಸ್ಥೆಯನ್ನು ರೂಪಿಸಿದೆ. ಎಲ್​ಎಂಎಸ್ ವ್ಯವಸ್ಥೆಯಡಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಕಲಿಕೆಗೆ ಅವಕಾಶ ದೊರೆಯುವುದಲ್ಲದೆ, ವಿದ್ಯಾರ್ಥಿಗಳ ಕಲಿಕೆಯ ಸಾಮರ್ಥ್ಯ ಹಾಗೂ ಶಿಕ್ಷಕರ ನಿರಂತರ ಮೌಲ್ಯಮಾಪನ ನಡೆಯುವ ಮೂಲಕ ಉನ್ನತ ಶಿಕ್ಷಣದ ಗುಣಮಟ್ಟದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಕ್ರಮದಿಂದ 4.5 ಲಕ್ಷ ವಿದ್ಯಾರ್ಥಿಗಳ ಹಾಗೂ 24 ಸಾವಿರ ಅಧ್ಯಾಪಕರ ಬೋಧನೆ ಮತ್ತು ಕಲಿಕೆಗಳಲ್ಲಿ ಸಕಾರಾತ್ಮಕ ಪರಿಣಾಮ ಉಂಟಾಗಲಿದೆ. ಡಿಜಿಟಲ್ ಕಲಿಕೆ ಯೋಜನೆಯನ್ನು 34.14 ಕೋಟಿ ರೂ. ವೆಚ್ಚದಲ್ಲಿ ಎರಡು ರೀತಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲನೆಯದಾಗಿ, ಎಲ್.ಎಂ.ಎಸ್ ಆಧಾರಿತ ಡಿಜಿಟಲ್ ಕಲಿಕೆಯ ಅನುಷ್ಠಾನ ಹಾಗೂ ಎರಡನೆಯದಾಗಿ 2500 ಐ.ಸಿ.ಟಿ ಎನೇಬಲ್ಡ್ ತರಗತಿ ಸ್ಥಾಪನೆ ಮಾಡಲಾಗುತ್ತದೆ. ಅಪೇಕ್ಷಿತ ಸಮಯ ಹಾಗೂ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಆಕರ ಸಾಮಗ್ರಿ ದೊರೆಯಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಮಾಹಿತಿ ಆಧರಿಸಿ ವಿಶ್ಲೇಷಣೆ ನಡೆಯಲಿದೆ ಎಂದು ಸಿಎಂ ಹೇಳಿದರು.
ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಕರ್ನಾಟಕ ಎಲ್​ಎಂಎಸ್ ಅಡಿ ವಿದ್ಯಾರ್ಥಿಗಳು ಯಾವ ಸಮಯದಲ್ಲಾದರೂ ಎಲ್ಲೇ ಇದ್ದರೂ ಆನ್​ಲೈನ್ ಮತ್ತು ಆಫ್​ಲೈನ್​ನಲ್ಲಿ ಕಲಿಕೆಯ ಪಠ್ಯಗಳನ್ನು ಪಡೆದುಕೊಳ್ಳಬಹುದು. ಜತೆಗೆ ಪ್ರತಿ ವಿದ್ಯಾರ್ಥಿಯ ಮೌಲ್ಯಮಾಪನದ ಮಾಹಿತಿ ಇದರಲ್ಲಿ ಲಭ್ಯವಿದೆ ಎಂದು ತಿಳಿಸಿದರು.
ಜಾಗತಿಕ ಮಟ್ಟದಲ್ಲಿ ಬೋಧನೆ-ಕಲಿಕೆಯಲ್ಲಿ ಗುರುತರ ಬದಲಾವಣೆಗಳಾಗುತ್ತಿವೆ. ಇದನ್ನು ಕ್ಷಿಪ್ರವಾಗಿ ಗ್ರಹಿಸಿರುವ ಕರ್ನಾಟಕ ಈ ನಿಟ್ಟಿನಲ್ಲಿ ನೂತನ ಪದ್ಧತಿಯನ್ನು ಜಾರಿಗೆ ತಂದಿದೆ. ತಂತ್ರಜ್ಞಾನದ ಮೂಲಕ ಏನೆಲ್ಲ ಸಾಧನೆ ಮಾಡಬಹುದು ಎಂಬುದಕ್ಕೆ ಇದೊಂದು ನಿದರ್ಶನ ಎಂದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿಯ ಸದಸ್ಯ ಪ್ರೊ. ಎಂ.ಕೆ. ಶ್ರೀಧರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು.
ಏನಿದು ಕಲಿಕಾ ನಿರ್ವಹಣಾ ವ್ಯವಸ್ಥೆ?
ಕರೊನಾ ಹಿನ್ನೆಲೆಯಲ್ಲಿ ಡಿಜಿಟಲ್ ಕಲಿಕೆಗೆ ಎಲ್ಲೆಡೆ ಹೆಚ್ಚು ಒತ್ತು ಸಿಗುತ್ತಿದೆ. ಎಲ್​ಎಂಎಸ್ ಆಧಾರಿತ ಡಿಜಿಟಲ್ ಕಲಿಕೆಯನ್ನು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ, 14 ಸರ್ಕಾರಿ ಇಂಜಿನಿಯರಿಂಗ್ ಮತ್ತು 87 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಜಾರಿ ಮಾಡಲಾಗುತ್ತಿದ್ದು, ಈ ಉಪಕ್ರಮದಿಂದ ಸುಮಾರು 4.5 ಲಕ್ಷ ವಿದ್ಯಾರ್ಥಿಗಳ ಕಲಿಕೆ ಹಾಗೂ 24,000 ಅಧ್ಯಾಪಕರ ಬೋಧನೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಉಂಟಾಗಲಿವೆ. ‘ನಮ್ಮ ಶಕ್ತಿ, ನಮ್ಮ ಭವಿಷ್ಯ’ ಎನ್ನುವುದು ಈ ಪರಿಕಲ್ಪನೆಯ ಟ್ಯಾಗ್​ಲೈನ್.
ವಿಶೇಷತೆ ಏನು?
ಎಲ್​ಎಂಎಸ್ ಪೋರ್ಟಲ್​ಗಾಗಿhttp://karnatakalms.com/homeಲಿಂಕ್ ಕ್ಲಿಕ್ ಮಾಡಬಹುದು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 5 =
Remember me
