ತುಮಕೂರು:ಸಾಲಬಾಧೆ ತಾಳಲಾರದೆ ನಗರದಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಗರೀಬ್‌ಸಾಬ್‌ ಎಂಬುವವರು ಡೆತ್ ನೋಟ್ ಬರೆದಿಟ್ಟು, ವಿಡಿಯೋ ಸಹ ಮಾಡಿದ್ದರು.
ನಿನ್ನೆ ನಡೆದಂತಹ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಂದು‌ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಮೃತರ ಕುಟುಂಬದ ಸದಸ್ಯರನ್ನು ಭೇಟಿ‌ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಪರಮೇಶ್ವರ್ ಅವರು, ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಗರೀಬ್‌ಸಾಬ್‌ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು, ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ತಿಳಿಯಲಿದೆ ಎಂದರು.
ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಜಾಸ್ತಿಯಾಗಿದೆ. ಮೀಟರ್ ಬಡ್ಡಿ ಮಾಡುವರ, ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.
ಬಡವರ ಮೇಲೆ ದೌರ್ಜನ್ಯ: ಡೆತ್​ನೋಟ್​ ಬರೆದಿಟ್ಟು ಒಂದೇ ಕುಟುಂಬದ ಐದು ಮಂದಿ ಸಾವಿಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
