ಬೆಂಗಳೂರು:ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಕ್ಷೇತ್ರ, ಎರಡು ಪದವೀಧರ ಕ್ಷೇತ್ರಗಳಿಗೆ ಬುಧವಾರ ಚುನಾವಣೆ ನಡೆಯಲಿದೆ. 2,34 ಲಕ್ಷ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಕರೊನಾ ಮಾರ್ಗ ಸೂಚಿಯ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಚುನಾ ವಣೆ ನಡೆಸಲಾಗುತ್ತಿದೆ. ಮತದಾರರು ನಿರಾತಂಕವಾಗಿ ಮತದಾನ ಮಾಡಲು ಪೂರಕ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ಮಾಸ್ಕ್, ಫೇಸ್​ಶೀಲ್ಡ್, ಸ್ಯಾನಿಟೈಸರ್ ಬಳಕೆ ಮಾಡಿ ಕರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಿದ್ದಾರೆ.
549 ಮತಗಟ್ಟೆ ಸ್ಥಾಪನೆ:ಈ ಚುನಾವಣೆಗೆ ಒಟ್ಟು 549 ಮತಗಟ್ಟೆ ಸ್ಥಾಪಿಸಲಾಗಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.
ಮಸ್ಟರಿಂಗ್:ಮತಗಟ್ಟೆ ಸಿಬ್ಬಂದಿ ಮಂಗಳವಾರ ಮಧ್ಯಾಹ್ನದಿಂದಲೇ ಚುನಾವಣಾ ಪರಿಕರಗಳನ್ನು ಪಡೆದುಕೊಂಡು ನಿರ್ದಿಷ್ಟ ಮತಗಟ್ಟೆಗೆ ತೆರಳಿದ್ದಾರೆ. ಆಯಾ ಜಿಲ್ಲಾ ಕೇಂದ್ರಗಳಿಂದ ಮತಗಟ್ಟೆಗೆ ಬೇಕಾದ ಪರಿಕರಗಳನ್ನು ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಕರೊನಾ ಬಗ್ಗೆ ಯಾವುದೇ ಆತಂಕ, ಭಯ-ಭೀತಿ ಇಲ್ಲದೆ ಮತದಾನ ಮಾಡುವಂತೆ ಅರಿವು ಮೂಡಿಸಲಾಗಿದೆ. ಒಟ್ಟು 2,34,718 ಮತದಾರರ ಪೈಕಿ 1,42,889 ಪುರುಷ, 91,809 ಮಹಿಳಾ ಹಾಗೂ 20 ಇತರೆ ಇದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 47,584 ಪುರುಷ, 26,673 ಮಹಿಳೆ, 11 ಇತರೆ ಇದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 68,411 ಪುರುಷ, 40,712 ಮಹಿಳೆ ಮತ್ತು 4 ಇತರೆ ಸೇರಿ 1,09,127 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 18,948 ಪುರುಷ, 10,284 ಮಹಿಳಾ ಮತ್ತು 2 ಇತರೆ ಸೇರಿ 29,234 ಮತದಾರರಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 7,946 ಪುರುಷ, 14,140 ಮಹಿಳಾ ಹಾಗೂ 3 ಇತರೆ ಸೇರಿ 22,089 ಮತದಾರರನ್ನು ಒಳಗೊಂಡಿದೆ.
ಎಣಿಕೆ ಎಲ್ಲಿ?
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರ, ಕಲಬುರಗಿ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬೆಂಗಳೂರು ಶಿಕ್ಷಕರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಮತ ಎಣಿಕೆ ನವೆಂಬರ್ 2ರಂದು ನಡೆಯಲಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
