ಬೆಂಗಳೂರು:ವಿಧಾನ ಪರಿಷತ್ ಸಭಾಪತಿ ವಿರುದ್ಧ ಜೆಡಿಎಸ್​ನ 11 ಮಂದಿ ಸದಸ್ಯರು ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಮಯಗಳು 165ರ ಅಡಿಯಲ್ಲಿ ಈ ಸೂಚನೆ ನೀಡಲಾಗಿದೆ.
ಸಭಾಪತಿಗಳು ಪರಿಷತ್ತಿನ ಕಲಾಪಗಳನ್ನು ಮತ್ತು ನಡವಳಿಗಳನ್ನು ಪಕ್ಷಾತೀತವಾಗಿ ನಿರ್ವಹಿಸದೇ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವುದಾಗಿ ಜೆಡಿಎಸ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ, ರಮೇಶ್ ಗೌಡ, ಬಿಎಂಎಲ್ ಕಾಂತರಾಜ್, ಗೋವಿಂದರಾಜು, ಬಿ.ಎಂ.ಫಾರೂಕ್ ಸೇರಿದಂತೆ 11 ಮಂದಿ ಸದಸ್ಯರು ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದಾರೆ.
ಇದನ್ನೂ ಓದಿ:ಗೋಹತ್ಯೆ ನಿಷೇಧಿಸಿದ್ರೆ ಸಮಾಜದಲ್ಲಿ ಅಶಾಂತಿ, ಜನರ ಬಾಳು ಅಲ್ಲೋಲ-ಕಲ್ಲೋಲ: ಎಚ್​.ಡಿ.ದೇವೇಗೌಡ
ಜೆಡಿಎಸ್ ಬೆಂಬಲ:ಮೇಲ್ಮನೆ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸಲಿದೆ. ಸದನದಲ್ಲಿ ಪ್ರಸ್ತಾಪವಾಗುವ ವಿಷಯಗಳಿಗೆ ವಿಷಯಾಧಾರಿತವಾಗಿ ಬೆಂಬಲ ನೀಡಬೇಕಾಗುತ್ತದೆ. ಹಾಗಾಗಿ ನಾವು ಈ ವಿಷಯದಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಸದನದ ಒಳಗಿನ ವಿಚಾರವೇ ಬೇರೆ, ಹೊರಗಿನ ವಿಚಾರವೇ ಬೇರೆ. ಬಿಜೆಪಿಗೆ ಬೆಂಬಲ ನೀಡುವ ವಿಚಾರದ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ನಾವು ಈ ವಿಚಾರದಲ್ಲಿ ಬೆಂಬಲ ನೀಡಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗೋಹತ್ಯೆ ನಿಷೇಧಿಸಿದ್ರೆ ಸಮಾಜದಲ್ಲಿ ಅಶಾಂತಿ, ಜನರ ಬಾಳು ಅಲ್ಲೋಲ-ಕಲ್ಲೋಲ: ಎಚ್​.ಡಿ.ದೇವೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
