ಬೆಂಗಳೂರು: ಕರೊನಾ ವೈರಸ್ ಮೂಲಕ ಹರಡುವ Covid19 ಸೋಂಕು ಹರಡದಂತೆ ತಡೆಯಲು ಒಂಭತ್ತು ಜಿಲ್ಲೆಗಳಿಗೆ ಘೋಷಿಸಿದ್ದ ಲಾಕ್​ಡೌನ್ ಆದೇಶವನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಅವರು, ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ ಎಂದು ರಾಜ್ಯದ ಜನತೆಯನ್ನು ಕೋರಿದ್ದಾರೆ.
ಕರ್ನಾಟಕ ಬಂದ್​ – ನಾಳೆಯಿಂದ 31ರ ತನಕ ಕರ್ನಾಟಕ ಸಂಪೂರ್ಣ ಲಾಕ್​ಡೌನ್: 9 ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿ ನಿಯಂತ್ರಣ


ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ#ಕೋವಿಡ್_19ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನುರಾಜ್ಯಾದ್ಯಂತ ವಿಸ್ತರಿಸಲಾಗಿದೆ .
ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.
— CM of Karnataka (@CMofKarnataka)March 23, 2020

ಮುಖ್ಯಮಂತ್ರಿ ಶ್ರೀ@BSYBJPಅವರು,#ಕೋವಿಡ್_19ನಿಯಂತ್ರಣ ಕುರಿತಂತೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಹಾಗೂ ತಜ್ಞ ವೈದ್ಯರೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.#Covid_19#CoronaInKarnataka#FightbackIndiapic.twitter.com/BfWyCUx72d
— CM of Karnataka (@CMofKarnataka)March 23, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
