ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿಗೆ ಶಾಕ್‌ ನೀಡಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ.
ಇನ್ನೂ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.
ಸದ್ಯ ಶಿವರಾಮ್ ಹೆಬ್ಬಾರ್, ಬಸನಗೌಡ ಪಾಟೀಲ ಯತ್ನಾಳ್ ಗೆ ಬಿಜೆಪಿ ನಾಯಕರು ಕಾಯುತ್ತಿದ್ದಾರೆ.
ಶಾಸಕರ ಭವನದಲ್ಲಿ ಶಿವರಾಮ್ ಹೆಬ್ಬಾರ್ ಹಂಚಿಕೆ ಮಾಡಿರುವ ಕೊಠಡಿಗೆ ವಿಪ್ ಜಾರಿ ಮಾಡಿರುವ ನೋಟಿಸ್ ಅನ್ನು ಅಂಟಿಸಲು ದೊಡ್ಡನಗೌಡ ಪಾಟೀಲ್ ಮುಂದಾಗಿರುವುದು ತಿಳಿದುಬಂದಿದೆ.
ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಸೋಮಶೇಖರ್ ಅವರು, “11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ.‌ ಕಳೆದ ಬಾರಿ ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ,” ಎಂದರು.
‘ನೆಂಟಸ್ತನ ಬೇರೆ, ಬೀಗತನ ಬೇರೆ, ರಾಜಕಾರಣ ಬೇರೆ….’: ಮತ್ತೆ ಗುಡುಗಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
