ಬೆಂಗಳೂರು:ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆಯು ಕರ್ನಾಟಕ ರಾಜ್ಯ ಮೀಸಲು ಪೊಲೀಸ್​ (ಕೆಎಸ್​ಆರ್​ಪಿ) ಪಡೆಯಲ್ಲಿ 2,672 ಕಾನ್​ಸ್ಟೆಬಲ್​ ಹಾಗೂ ವಿವಿಧ ಪಡೆಗಳಲ್ಲಿ 162 ಎಸ್​ಐ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಪೊಲೀಸ್​ ಪಡೆಯಲ್ಲಿ ವೃತ್ತಿ ಜೀವನವನ್ನು ಆರಂಭಿಸಲು ಇಚ್ಛಿಸುವ ಧೈರ್ಯಶಾಲಿ ಹಾಗೂ ಶಿಸ್ತುಬದ್ಧ ಹಾಗೂ ಸೇವಾಸಕ್ತರಿಗಾಗಿ ಈ ಅವಕಾಶ ಕಲ್ಪಿಸುತ್ತಿರುವುದಾಗಿ ಪೊಲೀಸ್​ ಇಲಾಖೆ ತಿಳಿಸಿದೆ.
ಇದನ್ನೂ ಓದಿ;ಲಾಕ್​ಡೌನ್​ ನಡುವೆಯೇ ವಿವಿಧ ಇಲಾಖೆಯ 210 ಹುದ್ದೆಗಳ ನೇಮಕಾತಿಗೆ ಆಯ್ಕೆ ಪಟ್ಟಿ ಪ್ರಕಟಿಸಿದ ಕೆಪಿಎಸ್​ಸಿ
ವಿಶೇಷ ಮೀಸಲು ಪೊಲೀಸ್​ ಕಾನ್​ಸ್ಟೆಬಲ್​ಗಳ 2,420 ಹುದ್ದೆಗಳಿದ್ದು, 252 ಬ್ಯಾಂಡ್ಸ್​ಮೆನ್​ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೇ 8ರಿಂದ ksp.gov.in ಮೂಲಕ ಆನ್​ಲೈನ್​ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್​ 15 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ;ಕೆಲಸ ಹುಡುಕುತ್ತಿದ್ದೀರಾ? ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ ರಾಜ್​ ಇಲಾಖೆಯಲ್ಲಿ ಸಮಾಲೋಚಕರಾಗಿ
ಇನ್ನು, ಸಬ್​ ಇನ್​ಸ್ಪೆಕ್ಟರ್​ ಹುದ್ದೆಗಳಿಗೂ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಮೀಸಲು ಪಡೆಯಲ್ಲಿ 45, ಕೆಎಸ್​ಆರ್​ಪಿ-40, ಕೆಎಸ್​ಐಎಸ್​ಎಫ್​-51 ಹಾಗೂ ವೈರಲೆಸ್​ ವಿಭಾಗದಲ್ಲಿ 26 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.ಎಸ್​ಐ ಹುದ್ದೆಗಳಿಗೆ ಮೇ 26ರಿಂದ ಜೂನ್​ 26ರವರೆಗೆ ಅರ್ಜಿ ಸಲ್ಲಿಸಬಹುದು.
ವಿವರಗಳು ಹಾಗೂ ಅರ್ಜಿ ಭರ್ತಿ ಮಾಡಲು ಈ ಲಿಂಕ್​ ಬಳಸಬಹುದು: http://rec19.ksp-online.in/.
ವಿದ್ಯಾರ್ಹತೆ ಹಾಗೂ ಮೀಸಲಾತಿ ಕುರಿತಾದ ಅಧಿಸೂಚನೆ, ಅರ್ಜಿ ನಮೂನೆ ಮೊದಲಾವುಗಳನ್ನು ವೆಬ್​ಸೈಟ್​ನಲ್ಲಿ ಪಡೆಯಬಹುದು.
ಲಾಕ್​​ಡೌನ್​ ಆಗಿ ಮನೆಯಲ್ಲಿದ್ದವರಿಗೆ ನಿಮ್ಮೂರಲ್ಲೇ ಉದ್ಯೋಗಾವಕಾಶ ಎಲ್ಲ ಜಿಲ್ಲೆಗಳಲ್ಲೂ ಬೇಕಾಗಿದ್ದಾರೆ ತಾಂತ್ರಿಕ ಸಹಾಯಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fourteen =
Remember me
