ಮಂಡ್ಯ:ರಾಜಕಾರಣಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಸವಾಲು ಹಾಕುತ್ತಿರುವುದು ಆಗಾಗ ನಡೆಯುತ್ತಿರುತ್ತದೆ. ಈಗ ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದ್ದು, ಜೆಡಿಎಸ್​ನ ಸುರೇಶ್​ ಗೌಡರಿಗೆ ಮಾಜಿ ಸಂಸದ ಶಿವರಾಮೇಗೌಡ ಆಣೆ ಪ್ರಮಾಣಕ್ಕೆ ಪಂಥಾಹ್ವಾನ ಮಾಡಿದ್ದಾರೆ.
ಮಾಜಿ ಸಂಸದ ಎಲ್​.ಆರ್.ಶಿವರಾಮೇಗೌಡ ನಾಗಮಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದರು. ನನ್ನನ್ನು ಸೋಲಿಸಲೆಂದೇ ಪತ್ನಿಯನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದರು ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆರೋಪಿಸಿದ್ದರು.
ಇದನ್ನೂ ಓದಿ:ಬಿಜೆಪಿ ಸೋಲಿಗೆ ಒಳೇಟು ಕಾರಣ; ವರಿಷ್ಠರಿಗೆ ಪ್ರಭಾರಿಗಳ ವಿಶ್ಲೇಷಣಾತ್ಮಕ ವರದಿ
ಮೂರು ವರ್ಷದ ಹಿಂದಿನಿಂದಲೂ ಕುತಂತ್ರ ನಡೆಯುತ್ತಿತ್ತು, ಷಡ್ಯಂತ್ರ ಮಾಡಿ ನನ್ನನ್ನು ಸೋಲಿಸಲಾಯಿತು ಎಂದು ಸುರೇಶ್​ ಗೌಡ ಆರೋಪಿಸಿದ್ದರು. ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಿವರಾಮೇಗೌಡ, ಆರೋಪ ಮಾಡಿರುವ ಸುರೇಶ್ ಗೌಡ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ. ನಾನು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ ಎಂದು ಪ್ರಮಾಣ ಮಾಡುತ್ತೇನೆ. ಇದಕ್ಕೆ ಅವರೇ ದಿನಾಂಕ ನಿಗದಿ ಮಾಡಲಿ, ಇಲ್ಲ ನನಗೆ ಹೇಳಿದರೂ ನಾನೇ ನಿಗದಿ ಮಾಡುವೆ, ತಾಕತ್ತಿದ್ರೆ ಆಣೆ ಪ್ರಮಾಣಕ್ಕೆ ಬರಲಿ ಎಂದು ಸವಾಲೊಡ್ಡಿದ್ದಾರೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ; ಡಿ.ಕೆ.ಶಿವಕುಮಾರ್ ಡಿಸಿಎಂ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − 13 =
Remember me
