ಬೆಂಗಳೂರು:ಅನ್ಯಾಯದ ವಿರುದ್ಧ ಧ್ವನಿ ಎತ್ತುವವರು, ಪ್ರತಿಭಟನೆ ನಡೆಸುವವರನ್ನು ದೇಶದದ್ರೋಹಿ ಎಂದು ಕರೆಯುವುದು ಬಿಜೆಪಿಯ ವರಸೆ ಎಂದು ರಾಜ್ಯ ಕಾಂಗ್ರೆಸ್ ನೇರವಾಗಿ ಆರೋಪಿಸಿದೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪಗಳ ಜಟಾಪಟಿ ಎಗ್ಗಿಲ್ಲದೇ ಸಾಗುತ್ತಿದ್ದು, ಕೆಲ ದಿನಗಳಿಂದ ಕ್ರೀಡಾಪಟುಗಳ ಸಮೂಹ ಅತ್ಯಾಚಾರಿಗಳ ವಿರುದ್ಧ ಬೀದಿಗಿಳಿದು ನ್ಯಾಯ ಕೇಳುತ್ತಿರುವ ಸುದ್ದಿ ದೇಶದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಇದನ್ನೂ ಓದಿ:ಕಾಂಗ್ರೆಸ್​​ ನಾಯಕರು ದೇಶಭಕ್ತಿಯನ್ನು ಆರ್​ಎಸ್​​ಎಸ್​​ನಿಂದ ಕಲಿಯಲಿ!
ನೂತನ ಸಂಸತ್ ಭವನದ ಹೊರಗೆ ನಮಗೆ ನ್ಯಾಯ ಒದಗಿಸಿಕೊಡಿ ಎಂದು ಆಗ್ರಹಿಸುತ್ತಿದ್ದ ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಬಂಧಿಸದ್ದನ್ನು ಗಮನಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕುರಿತು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು.
ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ. ಕೇಂದ್ರ ಬಿಜೆಪಿ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಸಿಎಂ-ಡಿಸಿಎಂ ರಾಜ್ಯವನ್ನು ಅಶಾಂತಿಯ ಬೀಡಾಗಿ ಪರಿವರ್ತಿಸುತ್ತಿದ್ದಾರೆ: ಕಿಡಿಕಾರಿದ ರಾಜ್ಯ ಬಿಜೆಪಿ
ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರು – ದೇಶದ್ರೋಹಿಗಳು, ಸಿಎಎ, ಎನ್ಆರ್‌ಸಿ ವಿರುದ್ಧ ಪ್ರತಿಭಟಿಸಿದವರು – ದೇಶದ್ರೋಹಿಗಳು, ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವ ಕ್ರೀಡಾಪಟುಗಳು – ದೇಶದ್ರೋಹಿಗಳು. ಇದು ಬಿಜೆಪಿಯ ವರಸೆ. ಬಿಜೆಪಿ ಪ್ರಕಾರ “ನ್ಯಾಯ” ಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೇ? ಎಂದು ಬಿಜೆಪಿಯನ್ನು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
