ಬೆಂಗಳೂರು:ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ನಾಸೀರ್ ಹುಸೇನ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬೆಂಬಲಿಗರು ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
ಬಿಜೆಪಿ ನಾಯಕರು ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರಲ್ಲದೆ, ಮಂಗಳೂರು ಸೇರಿದಂತೆ ಕೆಲ ಭಾಗಗಳಲ್ಲಿ ಈಗಾಗಲೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ನಾಯಕರ ಆರೋಪಕ್ಕೆ ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ. ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಎಂದು ತಿಳಿಸಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು, ಉತ್ತರ ಕೊಡಿ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ!
ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ,
• ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್…pic.twitter.com/BRDtQKx7dv
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)February 27, 2024

• ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?• ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ.• ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಎಂದು ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಪಾಕ್​ ಬೆಂಬಲಿಗನಿಗೆ ರಾಜ್ಯಸಭೆ ಸದಸ್ಯ ಪಟ್ಟ: ಕಾಂಗ್ರೆಸ್​ ವಿರುದ್ಧ ಕಿಡಿಕಾಡಿದ ಬಿಜೆಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
