ಬೆಂಗಳೂರು:ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದ ತಾತ್ಕಾಲಿಕ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಇದಾಗಿದೆ.
ಕರೊನಾ ವೈರಸ್​ ಭೀತಿಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ನಿಟ್ಟಿನಲ್ಲಿ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ:ಜುಲೈ 1ಕ್ಕೆ ಶಾಲೆ ಆರಂಭ ಅನುಮಾನ? ಕ್ಲಾಸ್​ ಬೇಕಾ-ಬೇಡ್ವಾ ಪಾಲಕರೇ ನಿರ್ಧರಿಸ್ತಾರೆ..!
ವಿದ್ಯಾರ್ಥಿನಿಲಯ ತಾವು ವಾಸಿಸಿರುವ ಊರುಗಳಲ್ಲಿ ಹಾಗೂ ಬೇರೆ ಬೇರೆ ಊರುಗಳಲ್ಲಿ ಕಲಿಯುತ್ತಿರುವ ಮಕ್ಕಳು ಲಾಕ್​ಡೌನ್​ ಹಿನ್ನೆಲೆಯಲ್ಲಿ ತಮ್ಮೂರಿಗೆ ವಾಪಸಾಗಿರುವ ಕಾರಣ, ಅವರಿಗೂ ಅನುಕೂಲ ಆಗುವ ನಿಟ್ಟಿನಲ್ಲಿ ಅವರಿರುವ ಸ್ಥಳದ ಸಮೀಪದ ಜಿಲ್ಲೆಯ ಅಥವಾ ತಾಲೂಕಿನಲ್ಲಿ ಅವರು ಬಯಸುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಇದರ ಆಧಾರದ ಮೇಲೆ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಇದು ಕೇವಲ ತಾತ್ಕಾಲಿಕ ಪಟ್ಟಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ತಿದ್ದುಪಡಿಗಳು ಇದ್ದರೆ ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ತಿದ್ದುಪಡಿಗೆ ಇನ್ನೆರಡು ದಿನಗಳ ಅವಕಾಶ ಇವೆ. ಎಂದರೆ ಜೂನ್ 5ರವೆರೆಗೆ ಅವಕಾಶ ಕಲ್ಪಿಸಲಾಗಿದೆ. ತಿದ್ದುಪಡಿಯಾದ ನಂತರ ಅಂತಿಮ ಪಟ್ಟಿಯನ್ನು ಜೂನ್ 7 ರಂದು ಶಿಕ್ಷಣ ಇಲಾಖೆ ಪ್ರಕಟಿಸಲಿದೆ.
ಇದನ್ನೂ ಓದಿ:ಪುಟ್ಟ ಮಗು ಹೇಳಿದಂತೆ ಕೇಳುವುದು ಈ ಆನೆ; ಮುದ್ದುಕ್ಕಿಸುವ ಈ ಟಿಕ್​ಟಾಕ್​ ವಿಡಿಯೋ ಎಲ್ಲಿಯದು ಗೊತ್ತಾ?
ಒಟ್ಟು 16,229 ವಿದ್ಯಾರ್ಥಿಗಳು ಪ್ರಸ್ತುತ ತಾವಿರುವ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಇಚ್ಛೆ ವ್ಯಕ್ತಪಡಿಸಿರುವುದಾಗಿ ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದರು. ರಾಜ್ಯದಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದ ಹೊರ ರಾಜ್ಯದ ವಿದ್ಯಾರ್ಥಿಗಳು ತಮ್ಮ ಊರಿಗೆ ತೆರಳಿದ್ದು, ಅವರ ಇಚ್ಛೆಯಂತೆ ಆ ರಾಜ್ಯದ ಗಡಿ ಭಾಗದ ನಮ್ಮ ರಾಜ್ಯದ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ ಎಂದೂ ಅವರು ಹೇಳಿದ್ದರು.
ತಾತ್ಕಾಲಿಕ ಪಟ್ಟಿಯನ್ನು ಈ ಲಿಂಕ್​ನಲ್ಲಿ ನೋಡಬಹುದುhttp://pue.kar.nic.inವಿವರಗಳಿಗೆ ಪಿಯು ಮಂಡಳಿಯ ಸಹಾಯವಾಣಿ ಸಂಖ್ಯೆ- 080-23083900 ನ್ನು ಸಂಪರ್ಕಿಸಬಹುದಾಗಿದೆ.
‘ಇಂಡಿಯಾ’ದ ಬದಲು ‘ಭಾರತ’ ಬೇಕು ಎಂದಿದ್ದ ಅರ್ಜಿ: ಸುಪ್ರೀಂಕೋರ್ಟ್​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
