ಗದಗ:ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಳೆದ ಒಂದು ವಾರಗಳಿಂದ ಮಳೆಯಾಗುತ್ತಿದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗಿಲ್ಲ. ಇದು ಈ ಭಾಗದ ರೈತರಿಗೆ ಚಿಂತೆ ಕಾಡುವಂತೆ ಮಾಡಿದೆ. ಜೂನ್ ತಿಂಗಳು ಆರಂಭವಾಗಿದ್ದರೂ ವಾಡಿಕೆಯಂತೆ ಮಳೆಯಾಗದೇ ಇರುವುದರಿಂದ ರೈತರು ದೇವರ ಮೊರೆ ಹೋಗುತ್ತಿದ್ದಾರೆ.ಇದನ್ನೂ ಓದಿ:ತಂದೆಯ ಮರಣ ಪ್ರಮಾಣ ಪತ್ರ ಮಾಡಿಸಿಕೊಂಡಿದ್ದ ಮಕ್ಕಳಿಗೆ ಶಾಕ್!
ಗದಗ ಜಿಲ್ಲೆ ರೋಣ ತಾಲೂಕಿನ ಕೌಜಗೇರಿ ಗ್ರಾಮದಲ್ಲಿ ಮಳೆ ಕೊರತೆ ಉಂಟಾಗಿದೆ. ಸರಿಯಾಗಿ ಮಳೆಯಾಗದೇ ಇರುವುದರಿಂದ ಕೃಷಿ ಚಟುವಟಿಕೆ ಆರಂಭಿಸಿಲು ರೈತರು ಯೋಚಿಸುವಂತಾಗಿದೆ. ಇದೀಗ ಕೌಜಗೇರಿ ಗ್ರಾಮದ ಮುತ್ತೈದೆಯರು ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ.

ಕೌಜಗೇರಿ ಗ್ರಾಮದಲ್ಲಿ ಮುತ್ತೈದೆಯರು ಸೇರಿಕೊಂಡು ವಿಶೇಷ ಪೂಜೆ ನೆರವೇರಿಸಿದ್ದಾರೆ. ಗ್ರಾಮದ ಶ್ರೀ ಲಕ್ಷ್ಮಿ ದೇವಸ್ಥಾನದಿಂದ ಸುಮಾರು ನಾಲ್ಕು ಕಿಲೋ ಮೀಟರ್ ದೂರ ಹೊನ್ಯತ್ತೇಮ ದೇವಸ್ಥಾನದವರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಬಳಿಕ ಸಗಟ್ಟಿ, ಸಾರು ಮಾಡಿ ದೇವತೆಗೆ ನೈವೇದ್ಯ ಅರ್ಪಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × 2 =
Remember me
