ಬೆಂಗಳೂರು:ಬಿಪರ್‌ಜಾಯ್ ಚಂಡಮಾರುತ ಪ್ರಭಾವದಿಂದ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯ ರಾಜಧಾನಿಯಲ್ಲಿ ಬೆಳಗ್ಗಿನಿಂದಲೇ ಮಳೆ ಆರಂಭವಾಗಿದೆ. ಬಿಸಿಲಿನಿಂದ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನರಿಗೆ, ಇಂದು ಮುಂಜಾನೆಯಿಂದಲೇ ಮಳೆ ಸುರಿಯಲಾರಂಭಿಸಿರುವುದು ಹರ್ಷ ತಂದಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ರಾತ್ರಿಯಿಂದಲೂ ಸುರಿಯುತ್ತಿದ್ದ ತುಂತುರು ಮಳೆ, ಬೆಳಗಾಗುತ್ತಿದ್ದಂತೆ ಜೋರಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಗುಡುಗು-ಮಿಂಚಿನ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಭಾಗದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆಗಳಿದ್ದು, ಗಾಳಿಯ ವೇಗ ಗಂಟೆಗೆ 20 ರಿಂದ 30 ಕಿಮೀ ಇರಲಿದೆ. ಸೈಕ್ಲೋನ್ ಪರಿಣಾಮ ದೊಡ್ಡ ಅಲೆಗಳು ಸಮುದ್ರ ತೀರಕ್ಕೆ ಬಂದು ಅಪ್ಪಳಿಸುತ್ತಿವೆ.
ಇದನ್ನೂ ಓದಿ:ಜಲ್ಲಿಕಲ್ಲು, ಮರಳು ದುಬಾರಿ?: ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸಲು ರಾಜ್ಯ ಸರ್ಕಾರ ಸರ್ಕಸ್
ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯನ್ನು ನಿರೀಕ್ಷಿಸಲಾಗಿದೆ. ಉತ್ತಮ ಮಳೆಯಾಗುತ್ತಿರುವ ಪರಿಣಾಮ ರಾಜ್ಯದಲ್ಲಿ ಉಷ್ಣಾಂಶ ಕೂಡ ಸಾಮಾನ್ಯಕ್ಕಿಂತ ಕಡಿಮೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ -1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಕಡಿಮೆಯಾಗಿದೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 1 =
Remember me
