ಬೆಂಗಳೂರು:ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಿದೆ. 2022ರ ಜ.1 ರಿಂದ ಡಿ.31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಕೃತಿಗಳ ತಲಾ 4 ಪ್ರತಿಗಳನ್ನು ಫೆ. 20ರೊಳಗೆ ತಲುಪಿಸಬೇಕು.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿ ಬಹುಮಾನಕ್ಕೆ ಪಾತ್ರವಾಗಲಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು- 2 ಈ ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ ಅಥವಾ ಕೊರಿಯರ್ ಮೂಲಕ ಪುಸ್ತಕಗಳನ್ನು ಕಳುಹಿಸಬಹುದು.
ಮರುಮುದ್ರಣವಾದ ಕೃತಿಗಳು, ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಪರಿಗಣಿಸುವುದಿಲ್ಲ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್. ಕರಿಯಪ್ಪ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − eight =
Remember me
