ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್​ ಲಾಕ್​ಡೌನ್​ನೊಂದಿಗೆ 14 ದಿನಗಳ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿತ್ತು. ಇದೀಗ ಒಂದಿಷ್ಟು ಬದಲಾವಣೆಗಳೊಂದಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಪರಿಷ್ಕೃತ ಮಾರ್ಗಸೂಚಿಯ ಅನುಸಾರ ರಾಜ್ಯದಲ್ಲಿ ಅಗತ್ಯ ಸಾಮಾಗ್ರಿಗಳ ಅಂಗಡಿಗಳನ್ನು ಹೊರೆತುಪಡಿಸಿ ಬೇರೆಲ್ಲ ಅಂಗಡಿಗಳನ್ನು ಮುಚ್ಚಲಾಗುವುದು. ಮೊಬೈಲ್ ಶಾಪ್​, ಟಿವಿ-ಎಲೆಕ್ಟ್ರಾನಿಕ್​ ಶೋ ರೂಂ, ಬ್ಯಾಂಗಲ್​ ಸ್ಟೇಷನರಿ ಅಂಗಡಿಗಳು, ಚಿನ್ನಾಭರಣ ಅಂಗಡಿ, ಚಪ್ಪಲಿ ಅಂಗಡಿ, ಬಟ್ಟೆ ಅಂಗಡಿ ಸೇರಿ ಎಲ್ಲವನ್ನು ಮುಚ್ಚುವಂತೆ ತಿಳಿಸಲಾಗಿದೆ.
ಹೋಟೆಲ್​, ರೆಸ್ಟೋರೆಂಟ್​, ಬಾರ್​ಗಳನ್ನು ತೆರೆಯುವುದಕ್ಕೆ ಅವಕಾಶ ಕೊಡಲಾಗಿದೆಯಾದರೂ ಕೇವಲ ಪಾರ್ಸೆಲ್​ ಕೊಡುವಂತೆ ಆದೇಶಿಸಲಾಗಿದೆ. ಉಳಿದಂತೆ ಬಸ್ಸು, ಮೆಟ್ರೋ, ರೈಲು, ಆಟೋ, ಕ್ಯಾಬ್​ಗಳ ಸೇವೆ ಎಂದಿನಂತೆ ಇರಲಿವೆ. ಬ್ಯಾಂಕ್​, ಎಟಿಎಂ, ಮಾಧ್ಯಮ, ಇ ಕಾಮರ್ಸ್​ ಸೇವೆ ಖಾಸಗಿ ಸೆಕ್ಯುರಿಟಿ ಸಂಸ್ಥೆ, ಕಟಿಂಗ್​ ಶಾಪ್​, ಬ್ಯೂಟಿ ಪಾರ್ಲರ್​ಗಳನ್ನು ಹೆಚ್ಚಿನ ಸುರಕ್ಷತೆಯೊಂದಿಗೆ ಕೆಲಸ ಮಾಡಲು ಅನುಮತಿ ನೀಡಲಾಗಿದೆ. (ಏಜೆನ್ಸೀಸ್​)
ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬರುವುದು ಬೇಡ; ಕರೆ ಮಾಡಿ ಮಾರ್ಗದರ್ಶನ ಪಡೆಯಿರಿ

ಮಧು ಬಂಗಾರಪ್ಪಗೆ ಕರೊನಾ ಸೋಂಕು ದೃಢ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
