ಬೆಂಗಳೂರು:ಮಾರ್ಚ್ 5ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಲಿರುವ ಆಯವ್ಯಯಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನಮಾನಸದಲ್ಲಿ ಈ ಭಾರಿಯ ಬಜೆಟ್ ದಾಖಲಿಸಲು ಸಿಎಂ ನಿರ್ಧರಿಸಿದ್ದು, ಅದಕ್ಕಾಗಿ ಬಿಎಸ್​ವೈ ಸಿದ್ಧತೆ ನಡೆಸಿದ್ದಾರೆ.
ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆ ಮೇಲೆ ಹೆಚ್ಚು ನಿಗಾವಹಿಸಿರುವ ಸಿಎಂ, ಕೇಂದ್ರ ಸರ್ಕಾರದ ವಿಶೇಷ ಅನುದಾನ ಪಡೆದು ಬಜೆಟ್ ಯೋಜನೆಗಳನ್ನು ಸಕಾರಾಗೊಳಿಸಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಬಜೆಟ್ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಮೋದಿ ಭೇಟಿಯಾಗಿ ವಿಶೇಷ ಪ್ಯಾಕೇಜ್ ಪಡೆಯಲು ಮನವಿ ಮಾಡಲಿದ್ದಾರೆ. ಕೇಂದ್ರದ ವಿಶೇಷ ಅನುದಾನ ದೊರೆತರೆ ಬಜೆಟ್​ನಲ್ಲಿ ಮಹತ್ವದ ಘೋಷಣೆ ಮಾಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.
ನೀರಾವರಿ ಯೋಜನೆಗಳ ಪೂರ್ಣಗೊಳಿಸಲು ಕೇಂದ್ರದ ಸ್ಪೇಷಲ್ ಪ್ಯಾಕೇಜ್​ಗೆ ಮೊರೆ ಹೋಗಿರುವ ಸಿಎಂ, ಈ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ವಿಶೇಷ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ‌ ಸರ್ಕಾರ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಅನುದಾನ ತಂದು ಅಭಿವೃದ್ಧಿಪಡಿಸುವ ಭರವಸೆಯನ್ನು ಚುನಾವಣೆಗಳಲ್ಲಿ ನೀಡಲಾಗಿತ್ತು. ಅದರಂತೆ, ಕೇಂದ್ರದಿಂದ ವಿಶೇಷ ಅನುದಾನ ಪಡೆದು ಬಜೆಟ್​ನಲ್ಲಿ ಭರಪೂರ ಯೋಜನೆ ಘೋಷಣೆ ಮಾಡಲು ಸಿಎಂ ತೀರ್ಮಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 4 =
Remember me
