ಬೆಂಗಳೂರು:ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ ಫೆಬ್ರವರಿ 6ರಂದು ದೆಹಲಿ ಚಲೋ ನಡೆಸುತ್ತೇವೆ. ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಅಪ್ಪನ ಜೊತೆ ಮಲಗಿದ್ದ ಒಂದು ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು!
ವಿಧಾನಸೌಧದ ಸಮ್ಮೇಳ ಸಭಾಂಗಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಎಲ್ಲರೂ ಸೇರಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರು ಎಲ್ಲಿ ಜಾಗ ಕೊಡುತ್ತಾರೆ ನೋಡುತ್ತೇವೆ. ನಮ್ಮ ಹಕ್ಕನ್ನ ಕೇಳಲು ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರ ವಿರುದ್ಧ ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ ಮಾಡುತ್ತೇವೆ. ತೆರಿಗೆ ತಾರತಮ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ದೇಶದಲ್ಲೆ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಅತೀ ಹೆಚ್ಚು ತೆರಿಗೆ ಕಟ್ಟುತ್ತೇವೆ. ನಿನ್ನೆಯ ಬಜೆಟ್ ಮಾತ್ರ ಐದು ವರ್ಷದ ಬಜೆಟ್ ಗಮನಿಸಬೇಕು. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಕ್ಕಿಲ್ಲ. 2018-19 ರಲ್ಲಿ ಅನುದಾನಕ್ಕಿಂತ 40% ರಿಂದ 45% ಕಡಿಮೆ ಆಗಿದೆ. ಪ್ರತಿ ವರ್ಷ 7ಸಾವಿರ, ಎಂಟು ಸಾವಿರ ರೂ. ಕಡಿಮೆ ಆಗುತ್ತಿದೆ. ಬಜೆಟ್ ಡಬಲ್ ಆದರೂ ತೆರಿಗೆ ಪಾಲು ಹೆಚ್ಚು ಬಂದಿಲ್ಲ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್’ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್​ನಿಂದ ನಮಗೆ ಬಹಳ ನಿರಾಸೆಯಾಗಿದೆ. ಇದರ ಬಗ್ಗೆ ಹೋರಾಟ ಮಾಡುವ ಕುರಿತು ನಿರ್ಧಾರ ಮಾಡುತ್ತೇವೆ. ಲೋಕಸಭೆ ಚುನಾವಣೆ ಹಿನ್ನೆಲೆ ಜನರಿಗೆ ಏನು ಕೊಡುತ್ತೇವೆ ಎಂಬ ದಿಕ್ಸೂಚಿಯನ್ನಾದರೂ ಹೇಳಬೇಕಿತ್ತು. ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ಎಲ್ಲವೂ ಹುಸಿಯಾಗಿದೆ.
ನಾನು ದೆಹಲಿ, ಮುಂಬೈ ನಗರಗಳನ್ನು ಗಮನಿಸಿದ್ದೇನೆ. ನಮ್ಮ ನಗರ ಸಹ ಹೆಲ್ತ್ ಟೂರಿಸಂ ಆಗುತ್ತಿದೆ. ನಾನು ಒಂದಷ್ಟು ದಿನ ವೈದ್ಯಕೀಯ ಶಿಕ್ಷಣ ಸಚಿವ ಆಗಿದ್ದೆ. ಗ್ರಾಮೀಣ ಪ್ರದೇಶದ ಜನರನ್ನು ಬೆಂಗಳೂರಿಗೆ ತರುವುದಕ್ಕೆ ತುಂಬಾ ತೊಂದರೆ ಆಗುತ್ತಿದೆ. ಐಸಿಯು ಹಾಗೂ 108 ಏನಿದೆ ಅಲ್ಲಿ, ಸಿಬ್ಬಂದಿ ಕಾಳಜಿ ಮಾಡಬೇಕು ಎಂದರು.
108 ಸಿಬ್ಬಂದಿ ಖಾಸಗಿ ಆಸ್ಪತ್ರೆಗಳ ಜೊತೆ ಶಾಮೀಲು ಆಗ್ತಾ ಇದ್ದಾರೆ ಅಂತ ಕೇಳಿದ್ದೇನೆ. ಆಗ ರೋಗಿಗಳ ಕಡೆಯವರು ಆಸ್ತಿ, ಮನೆ ಮಾರಿಕೊಳ್ಳುವ ಸ್ಥಿತಿ ನಿರ್ಮಾಣ ಆಗಲಿದೆ. ಇಂದಿನ ಈ ಟೆಲಿ ಐಸಿಯು, ನಿಜಕ್ಕೂ ನಮ್ಮ ಸರ್ಕಾರಕ್ಕೆ ಇದೊಂದು ದೊಡ್ಡ ಕಿರೀಟ. ನಾಡಿನ ಜನತೆಯ ಆರೋಗ್ಯ ಕಾಪಾಡುವುದಕ್ಕೆ ಒಂದು ಆಶೀರ್ವಾದ ನಮಗೆ ಸಿಕ್ಕಿದೆ. ನಮ್ಮ ರಾಜ್ಯದಲ್ಲಿ ಮೆಡಿಕಲ್ ಕಾಲೇಜ್​ಗಳು ಬೇರೆ ಎಲ್ಲೂ ಇಲ್ಲ ಎಂದು ಹೇಳಿದ್ದಾರೆ.
ವಿವಾದದ ನಡುವೆ ಮತ್ತೆರಡು ಫೋಟೊ ಹಂಚಿಕೊಂಡ ಪವಿತ್ರಾಗೌಡ! ನಟ ದರ್ಶನ್​ ಫ್ಯಾನ್ಸ್​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
