ನವದೆಹಲಿ:ನಾವು 150 ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ. 130ಕ್ಕೂ ಅಧಿಕ ಸ್ಥಾನ ಗೆಲ್ಲುವ ನಿರೀಕ್ಷೆಯಿದೆ. ಸ್ಪಷ್ಟ ಬಹುಮತದ ಮೂಲಕ ಗೆಲ್ಲುವುದನ್ನು ಯಾರಿಂದಲೂ ಅಲ್ಲಗೆಳೆಯಲು ಆಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಗುರುವಾರ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಇರುವಷ್ಟು ಅಭ್ಯರ್ಥಿಗಳು ಬೇರೆ ಯಾವ ಪಕ್ಷಗಳಿಗೂ ಇಲ್ಲ, ನಮಗೆ ಒಂದೊಂದು ಕ್ಷೇತ್ರದಲ್ಲಿ 10- 12 ಜನ ಗೆಲ್ಲುವ ಅಭ್ಯರ್ಥಿಗಳು ಇದ್ದಾರೆ. ಕೆಲವೊಮ್ಮೆ ಇದು ಸಮಸ್ಯೆ ಆಗುತ್ತೆ. ಹಾಗೆ ನೋಡಿದರೆ ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಇದೆ. ಉದಾಹರಣೆಗೆ ಮೈಸೂರು ಭಾಗದಲ್ಲಿ ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ? ಇಡೀ ಮಂಡ್ಯ ಜಿಲ್ಲೆಯಲ್ಲಿ ಅವರಿಗೆ ಅಭ್ಯರ್ಥಿಗಳೇ ಇಲ್ಲ. ಬಿಜೆಪಿಯಲ್ಲಿ ಟಿಕೆಟ್ ಸಿಗದವರು ನಮ್ಮಲ್ಲಿಗೆ ಬರುತ್ತಾರೆ. ನಮ್ಮಲ್ಲಿ ಟಿಕೆಟ್ ಸಿಗದವರು ಬಿಜೆಪಿಗೆ ಹೋಗುತ್ತಾರೆ. ಇದೆಲ್ಲ ಚುನಾವಣಾ ಸಮಯದಲ್ಲಿ ಸಾಮಾನ್ಯ. ಯಾರಿಗೆ ಸೈದ್ಧಾಂತಿಕ ಬದ್ಧತೆ ಇರುತ್ತೆ ಅವರು ಪಕ್ಷ ಬಿಟ್ಟು ಹೋಗಲ್ಲ ಎಂದರು.
ಜಿಎಸ್ಟಿ ಪರಿಹಾರ ಮುಂದುವರಿಸಲಿ:ಜಿಎಸ್ಟಿ ಸಭೆಯಲ್ಲಿ ರಾಜ್ಯ ಸರ್ಕಾರದ ಪ್ರತಿನಿಧಿಗಳು ರಾಜ್ಯಗಳಿಗೆ ಜಿಎಸ್​ಟಿ ಪರಿಹಾರ ಮುಂದುವರಿಸುವಂತೆ ಒತ್ತಾಯ ಮಾಡಿಲ್ಲ. ಜಿಎಸ್​ಟಿ ಜಾರಿಯಾದ ಮೇಲೆ ರಾಜ್ಯಗಳಿಗೆ ನಷ್ಟವಾಗುತ್ತದೆ ಎಂದು ಆ ನಷ್ಟ ಭರಿಸಿ ಕೊಡಲು ಶೇ.14 ಪರಿಹಾರ ನೀಡಬೇಕು ಎಂದು ಹಿಂದೆ ತೀರ್ವನವಾಗಿತ್ತು. ಅನೇಕ ಬಾರಿ ಸದನದಲ್ಲಿ ಮತ್ತು ಹೊರಗಡೆ ಪರಿಹಾರ ಮುಂದುವರೆಸುವಂತೆ ಒತ್ತಾಯ ಮಾಡಿದ್ದೆ. ಪರಿಹಾರ ಕೊಡುವುದನ್ನು ನಿಲ್ಲಿಸಿದ್ರೆ ನಮ್ಮ ರಾಜ್ಯವೊಂದಕ್ಕೆ ವರ್ಷಕ್ಕೆ 20,000 ಕೋಟಿ ರೂಪಾಯಿ ನಷ್ಟವಾಗುತ್ತದೆ. ಹೀಗಾಗಿ ಪರಿಹಾರ ನೀಡುವುದನ್ನು 5 ವರ್ಷ ಮುಂದುವರೆಸಬೇಕು ಎಂದು ಒತ್ತಾಯಿಸಿದರು.
ಐಷಾರಾಮಿ ವಸ್ತುಗಳು ಮತ್ತು ಹಾನಿಕಾರಕ ವಸ್ತುಗಳ ಮೇಲೆ ಸೆಸ್ ಹಾಕಿ ಕೇಂದ್ರ ಸರ್ಕಾರವೇ ಹಣ ಸಂಗ್ರಹಿಸಿಕೊಳ್ಳುತ್ತದೆ. ಈ ಹಣದಲ್ಲಿ ಇಷ್ಟು ದಿನ ಪರಿಹಾರ ನೀಡುತ್ತಿದ್ದರು. 2026ರ ವರೆಗೆ ಸೆಸ್ ಸಂಗ್ರಹ ಮುಂದುವರೆದರೂ ರಾಜ್ಯಗಳಿಗೆ ಪಾಲು ಸಿಗಲ್ಲ. ಜಿಎಸ್​ಟಿ ಜಾರಿ ಮೊದಲು ಶೇ.14 ಇದ್ದ ತೆರಿಗೆ ಬೆಳವಣಿಗೆ ಈಗ ಶೇ.6 ಇದೆ. ಇದಕ್ಕೆ ಕೊವಿಡ್ ಕಾರಣ ಎಂದು ಹೇಳಿದರೂ, ರಾಜ್ಯಗಳಿಗೆ ತೆರಿಗೆ ಸಂಗ್ರಹ ಕಡಿಮೆ ಆಗಿರುವುದರಿಂದ ಈ ನಷ್ಟ ತುಂಬಿಕೊಡಬೇಕಾದವರು ಯಾರು? ಬಸವರಾಜ ಬೊಮ್ಮಾಯಿ ಅವರು ಜಿಎಸ್​ಟಿ ಸಭೆಗೆ ಹೋಗಿದ್ದರೂ ಕೂಡ ಬೇಡಿಕೆಯನ್ನೇ ಇಟ್ಟಿಲ್ಲ ಎಂದು ದೂರಿದರು.
ರೈತರು ಹಾಗೂ ಜನ ಸಾಮಾನ್ಯರು ಹೊಲ ಗದ್ದೆಗಳಲ್ಲಿ ಬಳಸುವ ಸಬ್ ಮೆರಿನ್ ಪಂಪ್ ಗಳ ಮೇಲೆ ಶೇ.12 ಇದ್ದ ತೆರಿಗೆಯನ್ನು ಶೇ.15 ಗೆ ಏರಿಸಿದ್ದಾರೆ. ಹಣ್ಣು, ತರಕಾರಿ ಮತ್ತು ಮೊಟ್ಟೆಗಳನ್ನು ಪ್ರತ್ಯೇಕಗೊಳಿಸುವ, ಗ್ರೇಡಿಂಗ್ ಹಾಗೂ ಹಾಲು ಕರೆಯುವ ಯಂತ್ರಗಳ ಮೇಲೆ ಇದ್ದ ತೆರಿಗೆಯನ್ನು ಶೇ.12 ಇಂದ ಶೇ.18 ಗೆ ಏರಿಸಿದ್ದಾರೆ. ಇದರಿಂದ ರೈತರಿಗೆ, ಸಾಮಾನ್ಯ ಜನರಿಗೆ ಹಾಗೂ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ಮಾಂಸಪ್ರಿಯರೇ ಎಚ್ಚರ; ಚಿಕನ್ ಲೆಗ್ ಪೀಸ್ ಪಾರ್ಸೆಲ್ ತಂದ ಗ್ರಾಹಕನಿಗೆ ಕಾದಿತ್ತು ಶಾಕ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 3 =
Remember me
