ಬೆಂಗಳೂರು: ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬಿಟ್ಟು ಸಮುದಾಯದ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಪಕ್ಷಾತೀತವಾಗಿ ಹೋರಾಡಬೇಕೆಂದು ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಂಘ ಒತ್ತಾಯಿಸಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು ಅವರು, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ನಮ್ಮಲ್ಲಿ ಒಡಕು ಮೂಡುವುದು ಸರಿಯಲ್ಲ. ಸಮುದಾಯದ ಹಿತಕ್ಕಾಗಿ ಎಲ್ಲರೂ ಕೈ ಜೋಡಿಸಲಿ ಎಂದು ಮನವಿ ಮಾಡಿದರು.
ಆರೋಪ-ಪ್ರತ್ಯಾಪ ಮಾಡಿದರೆ ಸಮುದಾಯಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಬೇರೆ ಸಮುದಾಯದವರಂತೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವನ್ನೂ ಮರೆತು ಹೋರಾಟ ಮಾಡಬೇಕು. ಪಂಚಮಸಾಲಿ ಸಮುದಾಯದ ಹಿತಕ್ಕಾಗಿ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಹೇಳಿದರು.
ಈ ಸಮುದಾಯಕ್ಕೆ ಎಲ್ಲರೂ ಕೂಡ ಪಕ್ಷಾತೀತವಾಗಿ ಕೈಜೋಡಿಸಿದ್ದಾರೆ. ಹಾಲಿ ಸಚಿವರಾದ ಮುರುಗೇಶ್ ಆರ್.ನಿರಾಣಿ, ಸಿ.ಸಿ.ಪಾಟೀಲ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು. ಹಿಂದೆ ಕೈಗಾರಿಕ ಸಚಿವರಾಗಿದ್ದ ನಿರಾಣಿ ಅವರು ಸಾಮಾನ್ಯವರ್ಗದಲ್ಲಿದ್ದ ಲಿಂಗಾಯಿತ ಪಂಚಮಸಾಯನ್ನು 3ಬಿಗೆ ಸೇರಿಸಲು ಭಾರೀ ಪ್ರಯತ್ನ ನಡೆಸಿದರು. ಅವರ ಹೋರಾಟದ ಫಲವಾಗಿ ನಾವು ಇಂದು ಈ ವರ್ಗಕ್ಕೆ ಸೇರ್ಪಡೆಯಾದೆವು ಎಂದು ತಿಳಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರ್ಪಡೆ ಮಾಡಲು ಮಾಜಿ ಸಚಿವ ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿದ್ದರು. ಆದರೆ ಕಾರಣಾಂತರಗಳಿಂದ ಇದು ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದರು. ಪಂಚಮಸಾಲಿ ಸಮುದಾಯದ ಅಭ್ಯುದಯಕ್ಕೆ ನಿರಾಣಿಯವರ ಕೊಡುಗೆಯನ್ನು ಯಾರೊಬ್ಬರೂ ಮರೆಯಬಾರದು. ಈಗಲೂ ಕೂಡ ಸಮುದಾಯಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಚಿವ ಸಿ.ಸಿ.ಪಾಟೀಲ್ ಕೂಡ ಶಕ್ತಿ ಮೀರಿ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ನಮ್ಮಲ್ಲೇ ಭಿನ್ನಾಭಿಪ್ರಾಯಗಳು ಮೂಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕೂಡ ಸಮುದಾಯಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಸಂಸತ್ತಿನಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯನ್ನು ಸ್ಥಾಪಿಸಲು ಅವರ ಸೇವೆ ಎಂದಿಗೂ ಮರೆಯುವಂತಿಲ್ಲ. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರ ವಾಜಪೇಯಿ ಅಧಿಕಾರಾವಧಿಯಲ್ಲಿ ಪ್ರತಿಮೆ ಸ್ಥಾಪನೆಗೆ ಸಾಕಷ್ಟು ಹೋರಾಟ ಮಾಡಿದ್ದಾರೆ ಎಂದು ತಿಳಿಸಿದರು.
ಪಂಚಮಸಾಲಿ ಮಠದ ಹರಿಹರ ಪೀಠ ಮತ್ತು ಕೂಡಲಸಂಗಮ ಮಠದ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಮೂಡಬಾರದು. ಎರಡು ಮಠಗಳು ಸಮುದಾಯಕ್ಕಾಗಿ ಒಗ್ಗೂಡಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ದಯಾನಂದ್ ಪಾಟೀಲ್, ಮಲ್ಲನಗೌಡ ಬಣಕಾರ್ ಮತ್ತಿತರರು ಉಪಸ್ಥಿತರಿದ್ದರು. (ವಿಜಯವಾಣಿ)
ಕೆಎಸ್​ಆರ್​ಟಿಸಿ ಬಸ್​ ಕಳುವು ಮಾಡಿದವ ಅಂದರ್​: ಖದೀಮ ಕೊಟ್ಟ ಕಾರಣ ಕೇಳಿ ಪೊಲೀಸರೇ ತಬ್ಬಿಬ್ಬು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − ten =
Remember me
