ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಶನಿವಾರ ರಾಜಧಾನಿ ಬೆಂಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಯಾದಗಿರಿ ಮತ್ತು ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಜೂನ್ 19 ರಿಂದ 22 ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ ಮತ್ತು ಚಿತ್ರದುರ್ಗದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಮಳೆ ಬೀಳಲಿದೆ.
ಜೂನ್ 1 ರಿಂದ 18 ರವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 109 ಮಿಮೀ ಮಳೆ ಬದಲಾಗಿ 78 ಮಿಮೀ ಮಳೆಯಾಗಿದ್ದು, ಶೇ.28 ಮಳೆ ಕುಂಠಿತವಾಗಿದೆ. ಕರಾವಳಿಯಲ್ಲಿ ಶೇ. 64, ಮಲೆನಾಡು ಶೇ 61, ಉತ್ತರ ಒಳನಾಡು ಶೇ.13 ಮಳೆ ಕೊರತೆಯಾದರೆ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ. 100 ಹೆಚ್ಚು ಮಳೆ ಬಿದ್ದಿದೆ.
ಮಾಂಸದ ಅಂಗಡಿ, ಕೋಳಿ ಅಂಗಡಿ ತೆರವುಗೊಳಿಸಿ ಅಶೋಕ್ ಜೀ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:17 − twelve =
Remember me
