ಬೆಂಗಳೂರು:ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿದ್ದು, ಕರ್ನಾಟಕ ಸರ್ಕಾರಕ್ಕೆ ಸೇರಿದ KKRTC ಬಸ್​ಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಬೀದರ್​ ಜಿಲ್ಲೆ ಭಾಲ್ಕಿ ತಾಲ್ಲೂಕಿನಿಂದ ಪುಣೆಯತ್ತ ಹೊರಟಿದ್ದ KKRTC ಬಸ್ KA-38-F-1201 ಅನ್ನು ಮಹಾರಾಷ್ಟ್ರದ ಉಮರ್ಗಾ ಬಳಿ ಬೆಂಕಿ ಹಚ್ಚಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಂತರ್​ರಾಜ್ಯ ಬಸ್​ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ KKRTC ನಿಗಮದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಮರಾಠ ಮೀಸಲಾತಿ ಕಿಚ್ಚು; ಶಾಸಕ-ಸಚಿವನ ಮನೆ, ಹೋಟೆಲ್​ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
ಈ ಕುರಿತು ಪ್ರತಿಕ್ರಿಯಿಸಿರುವ KKRTC ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಕರ್ನಾಟಕ ಸರ್ಕಾರಕ್ಕೆ ಸೇರಿದ ಬಸ್​ಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ್​ರಾಜ್ಯ ಸಾರಿಗೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದ ಉಮರ್ಗಾ ಬಳಿ ಪ್ರತಿಭಟನಕಾರರು ಬಸ್​ಗೆ ಅಡ್ಡಹಾಕಿ ಪ್ರಯಾಣಿಕರನ್ನು ಕೆಳಗಿಳಿಸಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನಿಂದ 39 ಪ್ರಯಾಣಿಕರಿಗೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮಾಹಾರಾಷ್ಟ್ರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ರಾಜ್ಯ ಸಾರಿಗೆ ನಿಗಮಕ್ಕೆ ಸೇರಿದ ಬಸ್​ಗಳನ್ನು ಹತ್ತಿರದ ಪೊಲೀಸ್​ ಠಾಣೆ ಹಾಗೂ ಡಿಪೋಗಳಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಾಹಾರಾಷ್ಟ್ರಕ್ಕೆ ಅಂತರ್​ರಾಜ್ಯ ಬಸ್​ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು KKRTC ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
