ಬೆಂಗಳೂರು:ಕರ್ನಾಟದಲ್ಲಿ ಕರೊನಾ ನಿಯಂತ್ರಣಕ್ಕೆಂದು ಮಾಡಲಾಗಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಸಡಿಲಿಸಲಾಗುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಅನ್​ಲಾಕ್ 3 ಘೋಷಣೆ ಮಾಡಿದ್ದಾರೆ. ಜುಲೈ 5ರಿಂದ ಜುಲೈ 19ರವರೆಗಿನ ಅನ್​ಲಾಕ್​ ಅನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಕರೊನಾ ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 5ರ ಬೆಳಿಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ.
1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.2. ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.13. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
ಇನ್ನುಳಿದಂತೆ ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ. ಕಡ್ಡಾಯವಾಗಿ ಮಾಸ್ಕ್​ ಧರಿಸುವುದು, ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಹಾಗೂ ಸ್ವಚ್ಛತೆ ಕಡೆಗೆ ಗಮನ ಕೊಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಮೂರು ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ!

ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
