ಬೆಂಗಳೂರು:ಕರಾವಳಿ ಸೇರಿ ರಾಜ್ಯಾದ್ಯಂತ ಮಂಗಳವಾರವೂ ವರುಣಾರ್ಭಟ ಮುಂದುವರಿದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜು.26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಈ ಜಿಲ್ಲೆಗಳಲ್ಲಿ ಜು.27ರಂದು ಆರೆಂಜ್ ಅಲರ್ಟ್ ಇದ್ದರೆ, ಜು.28ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿಯಲ್ಲಿಯೂ ಮುಂದಿನ 48 ಗಂಟೆ, ಬೀದರ್ ಮತ್ತು ಕಲಬುರಗಿಯಲ್ಲಿ ಜು.27ರಂದು ಭಾರಿ ಮಳೆ ಸುರಿಯುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಸನ, ಬಳ್ಳಾರಿಯಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡದ ಕೋಡ್ಕಣಿ 91 ಮಿ.ಮೀ., ಜಗಲ್ಪೇಟೆ 89.5 ಮಿ.ಮೀ.,ಕೊಪ್ಪ 60 ಮಿ.ಮೀ.,ದಕ್ಷಿಣ ಕನ್ನಡದ ಜಿಲ್ಲೆಯ ಸೋಮೇಶ್ವರ 69.5 ಮಿ.ಮೀ., ಪಲ್ಲಡ್ಕ 64.5 ಮಿ.ಮೀ., ದಾವಣಗೆರೆಯ ನಿಲಗೋಳ 80 ಮಿ.ಮೀ., ಬಳ್ಳಾರಿಯ ದೂಪದಹಳ್ಳಿ 62.9 ಮಿ.ಮೀ., ಬೆಳಗಾವಿಯ ಪರವಾಡ 62.5 ಮಿ.ಮೀ.,ಕೊಡಗಿನ ಮಾಡೆಯಲ್ಲಿ 61.5 ಮಿ.ಮೀ, ಉಡುಪಿಯ ನಡಪಾಳುನಲ್ಲಿ 59.5 ಮಿ.ಮೀ ಮಳೆಯಾಗಿದೆ ಎಂದು ವರುಣಾಮಿತ್ರ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
