ಬೆಂಗಳೂರು:ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಸ್ವತಃ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದರೂ ಇನ್ನೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬಂಧನ ಏಕೆ ಆಗಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಘಟಕ ಪ್ರಶ್ನಿಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಮೇಶ್ ಬಂಧನ ಯಾವಾಗ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಕೆಣಕಿದೆ.
ಸಂತ್ರಸ್ತೆ ನಿರ್ಭಿತಿಯಿಂದ, ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾವುದೇ ಅಂಜಿಕೆಯಿಲ್ಲದೆ, ಒತ್ತಡವಿಲ್ಲದೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾಳೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ. ಸಂತ್ರಸ್ತೆ ಕೋರ್ಟಿಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಲಾಗಿದೆ.
ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು.
ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ,
ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ#BuildupBommaiಅವರೇ?#ArrestRapistRamesh
— Karnataka Congress (@INCKarnataka)March 30, 2021

ಯುವತಿ ವಿಡಿಯೋ ಹೇಳಿಕೆ ನೀಡಿದಾಗಲೂ ಕೇಸ್ ಹಾಕಲಿಲ್ಲ, ಸಂತ್ರಸ್ತೆ ದೂರು ಸಲ್ಲಿಸಿ, FIR ದಾಖಲಾದರೂ ಬಂಧಿಸಲಿಲ್ಲ. ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದರೂ ಬಂಧನವಿಲ್ಲ ಬೊಮ್ಮಾಯಿ ಅವರೇ ಇಷ್ಟಾದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ? ಜನತೆಗೆ ಕಾನೂನಿನ ಮೇಲಿದ್ದ ನಂಬಿಕೆಯನ್ನೇಕೆ ನಾಶಗೊಳಿಸುತ್ತಿದ್ದೀರಿ? ಎಂದು ಕೇಳಿದೆ.
ಇದನ್ನೂ ಓದಿ:ಆಸ್ಪತ್ರೆಯ ಟಾಯ್ಲೆಟ್​ನಲ್ಲಿ ಆಕ್ಸಿಜನ್​ ಪೈಪ್​ನಿಂದ ನೇಣು ಬಿಗಿದುಕೊಂಡು ಸತ್ತ ಕರೊನಾ ರೋಗಿ!
ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು. ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ, ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ ಅವರೇ? ಬಿಜೆಪಿ ಆಡಳಿತದಲ್ಲಿ ಕಾನೂನು ಬದಲಾಗಿದೆ. ಇಲ್ಲಿ ಸಂತ್ರಸ್ತೆಯನ್ನು ಪೊಲೀಸ್ ವಶಕ್ಕೆ ಪಡೆಯಬಹುದು, ಆರೋಪಿ ಸ್ವ ಇಚ್ಛೆಯಂತೆ ತಿರುಗಾಡಿಕೊಂಡಿರಬಹುದು ಎಂದು ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಕೆಣಕಿದೆ.
ಮತ್ತೆ ಕರೊನಾ ಅಟ್ಟಹಾಸ: ರಾಜ್ಯಾದ್ಯಂತ ಇಂದು ಒಂದೇ ದಿನ 21 ಮಂದಿ ಬಲಿ

ಏರ್​ಪೋರ್ಟ್​ ದ್ವಾರದಲ್ಲಿ ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡ ಚಾಲಕ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:8 + 1 =
Remember me
