ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಇಲ್ಲಿಯವರೆಗೆ 443ಕ್ಕೆ ಏರಿದ್ದು, 141 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 16 ಹೊಸ ಕೇಸುಗಳು ಪತ್ತೆಯಾಗಿವೆ. ಈ ಪೈಕಿ ಅತ್ಯಧಿಕ ಮಂದಿ 40 ವರ್ಷ ಒಳಗಿನವರು ಎನ್ನುವುದು ಆತಂಕಕ್ಕೆ ಕಾರಣವಾಗಿದೆ. ಜತೆಗೆ, ಕಳೆದೆರಡು ದಿನಗಳಿಗೆ ಹೋಲಿಸಿದರೆ ಈ ಸಂಖ್ಯೆಯಲ್ಲಿ ತುಸು ಹೆಚ್ಚಳ ಕಂಡುಬಂದಿದೆ. ಬೆಂಗಳೂರು ನಗರ ಒಂದರಲ್ಲಿಯೇ 9 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದನ್ನು ಹೊರತುಪಡಿಸಿದರೆ ವಿಜಯಪುರದಲ್ಲಿ 2, ದಕ್ಷಿಣ ಕನ್ನಡ ಬಂಟ್ವಾಳದಲ್ಲಿ 1, ಮಂಡ್ಯದಲ್ಲಿ 1 ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಒಂದು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 443ಕ್ಕೆ ಏರಿದೆ. ಈ ಪೈಕಿ 141 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ 17 ಮಂದಿ ಮೃತಪಟ್ಟಿದ್ದಾರೆ.ಬೆಂಗಳೂರಿನಲ್ಲಿ ಕಂಡುಬಂದ ಹೊಸ ಪ್ರಕರಣಗಳಲ್ಲಿ 8 ಮಂದಿ 40 ವರ್ಷ ವಯಸ್ಸಿನ ಒಳಗಿನವರಾಗಿದ್ದರೆ ಒಬ್ಬರು ಮಾತ್ರ 43 ವರ್ಷದವರು. ಈ ಪೈಕಿ, ಎಲ್ಲರೂ ಪುರುಷರಾಗಿದ್ದಾರೆ. ವಿಜಯಪುರದಲ್ಲಿ 32 ವರ್ಷದ ಪುರುಷ ಹಾಗೂ 25 ವರ್ಷದ ಯುವತಿ ಸೋಂಕು ಪೀಡಿತರಾಗಿದ್ದರೆ, ಹುಬ್ಬಳ್ಳಿಯಲ್ಲಿ 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ. ಇನ್ನೋರ್ವ ಸೋಂಕು ಪೀಡಿತ ಮಹಿಳೆಗೆ 30 ವರ್ಷ. ಮಂಡ್ಯದಲ್ಲಿ 47 ವರ್ಷದ ಪುರುಷ, ಮಳವಳ್ಳಿಯಲ್ಲಿ 28 ವರ್ಷದ ಮಹಿಳೆ ಹಾಗೂ ಬಂಟ್ವಾಳದಲ್ಲಿ 78 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದೆ.ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one + 14 =
Remember me
