ಬೆಂಗಳೂರು:ರಾಜ್ಯದಲ್ಲಿ ಕರೊನಾ ಕೇಕೇ ಜೋರಾಗುತ್ತಲೇ ಇದೆ. ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದಿರುವವರಲ್ಲಿ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತ್ತಲೇ ಸಾಗಿದೆ. ಅದರಲ್ಲಂತೂ ಮುಂಬೈನಿಂದ ರಾಜ್ಯದ ವಿವಿಧ ಭಾಗಗಳಿಗೆ ಬಂದಿರುವವರಲ್ಲಿ ವಿಪರೀತ ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗುತ್ತಿದೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 54 ಹೊಸ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1146ಕ್ಕೆ ಏರಿದೆ. ಈ ಪೈಕಿ 497 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದರೆ, 611 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾ ಮಾರಿ ಇಲ್ಲಿಯವರೆಗೆ 37 ಮಂದಿಯನ್ನು ಬಲಿ ಪಡೆದಿದೆ.
ಇದನ್ನೂ ಓದಿ:ಕರೊನಾ ಪರೀಕ್ಷಾ ಸಾಧನಕ್ಕೆ ಸ್ವದೇಶಿ ಟಚ್​! ಚೀನಾಕ್ಕೆ ಸೆಡ್ಡು ಹೊಡೆದ ಕೇಂದ್ರ – ಮತ್ತೊಮ್ಮೆ ವಿಶ್ವದ ಕಣ್ಣು ಭಾರತದತ್ತ…!
ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಪತ್ತೆಯಾಗಿರುವ ಪ್ರಕರಣಗಳು ಈ ರೀತಿ ಇವೆ.
ಮಂಡ್ಯ 22, ಕಲಬುರಗಿ 10, ಹಾಸನ 6, ಧಾರವಾಡ 4, ಕೋಲಾರ 3, ಯಾದಗಿರಿ 3, ದಕ್ಷಿಣ ಕನ್ನಡ 2, ಶಿವಮೊಗ್ಗ 2, ಉಡುಪಿ 1, ವಿಜಯಪುರ 1
ಇದನ್ನೂ ಓದಿ:ಮದುವೆ, ಸಭೆ- ಸಮಾರಂಭಕ್ಕೆ ಸಜ್ಜಾಗಿದ್ದೀರಾ? ಹಾಗಿದ್ದರೆ ಸರ್ಕಾರದ ಮಾರ್ಗಸೂಚಿಯನ್ನೊಮ್ಮೆ ಓದಿಕೊಳ್ಳಿ…
ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಸಂಪೂರ್ಣ ವಿವರ ಇಲ್ಲಿದೆ:

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten − eight =
Remember me
