ಬೆಂಗಳೂರು :ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ನಡೆಸುವ 2021 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್​​ಟಿಇಟಿ) ಆಗಸ್ಟ್ 22 ರಂದು ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ ಶುಕ್ರವಾರದಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 20 ಕೊನೆಯ ದಿನವಾಗಿದೆ.
1 ರಿಂದ 5 ನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ 6 ರಿಂದ 8 ನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ, ಬಿ.ಎಸ್ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆಯ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ, ಬಿಎಸ್ಸಿ.ಇಡಿ. ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ವೆಬ್​ಸೈಟ್​ ಅಡ್ರೆಸ್​ https://sts.karnataka.gov.in/TET/ ಬಳಸಬಹುದು.
ಇದನ್ನೂ ಓದಿ:ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!
ಆ. 22 ರಂದು ಬೆಳಗ್ಗೆ 9.30 ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ದಿನಾಂಕ ಆ. 12 ರಿಂದ ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ದೊಣ್ಣೆ, ಕತ್ತಿ ಝಳಪಿಸಿದ ಮದುವೆ ಹೆಣ್ಣು! …ಚಕಿತರಾದ ಬಂಧುಬಳಗ

ಕೇಂದ್ರ ಸರ್ಕಾರದ ಐಟಿ ನಿಯಮ ಪಾಲಿಸಿ, ಮಾದರಿಯಾದ ‘ಕೂ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
