ಬೆಂಗಳೂರು: ಕೆಎಎಸ್ ಅಧಿಕಾರಿ ಎಸ್.ಪಿ. ಮಹಾಂತೇಶ್ ಹತ್ಯೆ ಪ್ರಕರಣ 8 ವರ್ಷಗಳ ಬಳಿಕ ಮತ್ತೆ ಜೀವ ಪಡೆದಿದೆ. ಪ್ರಕರಣ ಸಂಬಂಧ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್​ಎಚ್​ಆರ್​ಸಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.
ಆರೋಪಿಗಳ ವಿರುದ್ಧ ತನಿಖೆ ಪೂರ್ಣಗೊಂಡಿದ್ದರೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುವಂತೆ 2015ರಲ್ಲಿ ತೀರ್ಪು ನೀಡಿತ್ತು. ಇದೀಗ ಪ್ರಕರಣದ ವರದಿ ಕೇಳಿ ಪೊಲೀಸ್ ಕಮಿಷನರ್ ಹಾಗೂ ಸಹಕಾರ ಇಲಾಖೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಆಯೋಗದ ಹಾಲಿ ಅಧ್ಯಕ್ಷ ಡಿ.ಎಚ್. ವಘೇಲಾ ಪತ್ರ ಬರೆದಿದ್ದಾರೆ.
ಇದನ್ನೂ ಓದಿ:ನಾಲ್ವರು ಉಗ್ರರು ಭದ್ರತಾ ಪಡೆ ಗುಂಡಿಗೆ ಬಲಿ: ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಉಗ್ರ ಬೇಟೆ
ಬೆಂಗಳೂರಿನ ಸಹಕಾರ ಸಂಘಗಳ ಲೆಕ್ಕಪರಿಶೋಧನೆ ವಿಭಾಗ ಉಪ ನಿರ್ದೇಶಕರಾಗಿದ್ದ ಮಹಾಂತೇಶ್, ಸಹಕಾರ ಸಂಘಗಳ ವಹಿವಾಟುಗಳನ್ನು ಲೆಕ್ಕಪರಿಶೋಧನೆಗೆ ಒಳಪಡಿಸಲು ಮುಂದಾಗಿದ್ದರು. ಈ ನಡುವೆ 2012ರ ಮೇನಲ್ಲಿ ಅರಮನೆ ರಸ್ತೆಯ ಮಹಾರಾಣಿ ಕಾಲೇಜು ವೃತ್ತದಲ್ಲಿ ಹತ್ಯೆಯಾಗಿದ್ದರು. ಪ್ರಕರಣ ಸಂಬಂಧ ಕೆಲ ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು.
ಪಾಕ್​ ಗುಂಡಿನ ದಾಳಿಗೆ ಭಾರತೀಯ ಮುಸ್ಲಿಂ ಮಹಿಳೆ ಬಲಿ: ಗಡಿಯಲ್ಲಿರುವ ಮಸೀದಿ, ಮನೆಗಳಿಗೂ ಹಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
