ಬೆಂಗಳೂರುಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಆ.27ರಂದು ನಡೆಸಲು ಮರು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಆ.15ರರ ನಂತರ ಪ್ರವೇಶ ಪತ್ರಗಳನ್ನು ಆಯೊಗದ ಅಂತರ್ಜಾಲದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ತಿಳಿಸಿದ್ದಾರೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನಲ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಆ.25ರಂದು ನಡೆಸಲು ನಿಗದಿ ಮಾಡಲಾಗಿತ್ತು. ಈ ದಿನವೇ ಐಬಿಪಿಎಸ್ ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆ ನಡೆಸಲು ಆಯೋಗವು ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಕಾಲಾವಕಾಶ ನೀಡದೆ, ಬೇರೆ ಪರೀಕ್ಷೆಗಳೊಂದಿಗೆ ಮತ್ತೆ ಸಂಘರ್ಷವಾಗದಂತೆ ಎಚ್ಚರಿಗೆ ವಹಿಸಿ ಅಲ್ಪಕಾಲ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಆ.27ರಂದೇ ಪರೀಕ್ಷೆ ನಡೆಸಲಾಗುತ್ತಿದೆ. ಉಳಿದಂತೆ ಯಾವುದೇ ಬದಲಾವಣೆಗಳಿಲ್ಲ ಎಂದು ತಿಳಿಸಿದ್ದಾರೆ.
ಸಾಂದರ್ಭಿಕ ರಜೆಘೋಷಣೆ:
ಆ.27ರಂದು ಸರ್ಕಾರಿ ಕಾರ್ಯ ನಿರ್ವಹಣಾ ದಿನವಾಗಿರುವ ಕಾರಣ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ ರಾಜ್ಯದ ಎಲ್ಲ ಜಿಲ್ಲೆಗಳ ಪರೀಕ್ಷಾ ಉಪ ಕೇಂದ್ರಗಳಿಗೆ ವಿಶೇಷ/ಸಾರ್ವತ್ರಿಕ ರಜೆಯನ್ನು ೋಷಿಸಲು ಹಾಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗಷ್ಟೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್) ಪತ್ರ ಬರೆದು ಕೆಪಿಎಸ್ಸಿ ಪರೀಕ್ಷೆ ಮರು ನಿಗದಿ ಮಾಡುವ ಕುರಿತಂತೆ ಪತ್ರ ಬರೆದಿತ್ತು.
ಕೆಎಎಸ್ ಮತ್ತು ಐಬಿಪಿಎಸ್ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿರುವುದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ‘ವಿಜಯವಾಣಿ’ಯು ಜು.31ರಂದು ವಿಶೇಷ ವರದಿ ಪ್ರಕಟಿಸಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿತ್ತು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × 3 =
Remember me
