| ಕಾರ್ಯಕಾರಿ ಸಮಿತಿ ಅಧಿಕಾರವಧಿ ವಿಸ್ತರಣೆ ಪ್ರಶ್ನಿಸಿದ್ದ ಅರ್ಜಿ ವಾಪಸ್
ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಅಧಿಕಾರವಧಿ ವಿಸ್ತರಣೆ ವಿರೋಧಿಸಿ ಹೈಕೋರ್ಟ್​ನಲ್ಲಿ ಸಲ್ಲಿಸಿದ್ದ ಮೊಕದ್ದಮೆಯನ್ನು ಅರ್ಜಿದಾರರು ಹಿಂಪಡೆದಿದ್ದು, ಪರಿಷತ್ತಿನ ಅಧ್ಯಕ್ಷರ ಚುನಾವಣೆಗೆ ಎದುರಾಗಿದ್ದ ಸಮಸ್ಯೆಗೆ ಪರಿಹಾರ ದೊರೆತಿದೆ.
ನಾವು ಮಾಡಿರುವುದು ಕಾನೂನು ಬದ್ಧವಾಗಿವೆ ಎಂದು ನ್ಯಾಯಾಲಯದಲ್ಲಿಯೇ ಸಾಬೀತಾಗಿದೆ. ಬೈಲಾ ಪ್ರಕಾರ, ಅವಧಿ ಮುಗಿದ ಬಳಿಕ ಆರು ತಿಂಗಳು ಅಧಿಕಾರಾವಧಿ ವಿಸ್ತರಣೆಗೆ ಅವಕಾಶವಿದೆ. ಅದು ಕಾರ್ಯಕಾರಿ ಸಮಿತಿಯಲ್ಲಿ ನಿರ್ಣಯವಾಗಬೇಕು. ಆದರೆ, ನನಗೆ ಆ ಬಗ್ಗೆ ಕಿಂಚಿತ್ತೂ ಒಲವಿಲ್ಲ.| ಮನು ಬಳಿಗಾರ್ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ತು
ಈಗಿರುವ ಕಾರ್ಯಕಾರಿ ಸಮಿತಿ ಬೈಲಾ ತಿದ್ದುಪಡಿ ಮಾಡಿ ಅಧಿಕಾರವಧಿಯನ್ನು 3 ವರ್ಷಗಳಿಂದ 5 ವರ್ಷಗಳಿಗೆ ವಿಸ್ತರಿಸಿತ್ತು. ಬೈಲಾ ಪ್ರಕಾರ ಅನಿವಾರ್ಯ ಪರಿಸ್ಥಿತಿಯಲ್ಲಿ 6 ತಿಂಗಳಿಗೆ ವಿಸ್ತರಿಸಿಕೊಳ್ಳಲು ಮಾತ್ರವೇ ಸಮಿತಿಗೆ ಅವಕಾಶವಿದೆ. ಇದನ್ನು ಪ್ರಶ್ನಿಸಿ ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ.ರಾಮಕೃಷ್ಣೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ:ಐಪಿಎಲ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಗಾಯಕ!
ಬೈಲಾ ತಿದ್ದುಪಡಿ ಪ್ರಕಾರ ಅಧ್ಯಕ್ಷರ ಅಧಿಕಾರವಧಿ 2021ರ ಮಾರ್ಚ್​ಗೆ ಅಂತ್ಯವಾಗಲಿದೆ. ಕಸಾಪ ಹಿತದೃಷ್ಟಿಯಿಂದ ಮೊಕದ್ದಮೆ ಹಿಂದಕ್ಕೆ ಪಡೆದುಕೊಂಡಿದ್ದೇನೆ. ಈಗ ಚುನಾವಣೆಗೆ ದಾರಿ ಸುಗಮವಾಗಿದ್ದು, ಕೂಡಲೇ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಕೋ.ವೆಂ.ರಾಮಕೃಷ್ಣೇಗೌಡ ಒತ್ತಾಯಿಸಿದ್ದಾರೆ.
ರೈಲ್ವೆ ಟಿಕೆಟ್ ಕನ್​ಫರ್ಮ್ ಮಾಡ್ತಾ ಇದ್ದ ‘ರಿಯಲ್ ಮ್ಯಾಂಗೋ’ ಆರ್​ಪಿಎಫ್ ಬಲೆಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
