ಬೆಂಗಳೂರು:ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಹನ್ನೆರಡು ಪತ್ರಕರ್ತರು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಕೇರಳದ ಎರ್ನಾಕುಲಂನಲ್ಲಿ ಏ.30ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರಿನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರು ಪ್ರಶಸ್ತಿಗಳಿಗೆ ಆಯ್ಕೆ ಆದವರ ಹೆಸರನ್ನು ಪ್ರಕಟಿಸಿದರು. ಪ್ರಶಸ್ತಿ ತಲಾ 10 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಮದುವೆ ಸಂಭ್ರಮದಲ್ಲಿರುವಾಗಲೇ ಹೃದಯಾಘಾತ; ನರ್ತಿಸುತ್ತಿರುವಾಗ ಕುಸಿದು ಬಿದ್ದು ಸಾವಿಗೀಡಾದ ಮಹಿಳೆ
ಮಂಗಳೂರಿನ ಹಿರಿಯ ಪತ್ರಕರ್ತರ ಮನೋಹರ್ ಪ್ರಸಾದ್ (ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿಯವರ ನೆನಪಿಗಾಗಿ ಶ್ರೀ ಮಠವು ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಮಂಗಳೂರಿನ ಯು.ಕೆ. ಕುಮಾರನಾಥ್ (ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಇದರ ಸಂಸ್ಥಾಪಕ ಹಾಗೂ ರಾಜ್ಯ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಬೆಳಗಾವಿ ಜಿಲ್ಲೆ ಸಂಯುಕ್ತ ಕರ್ನಾಟಕ ಪತ್ರಿಕೆಯ ಕೀರ್ತಿಶೇಖರ್ ಕಾಸರಗೋಡು (ಹವ್ವಾ ಹಸನ್ ಫೌಂಡೇಷನ್​ ಕುದ್ಕೋಳಿ ಸಂಸ್ಥಾಪಕ ಹಾಗೂ ಹಿರಿಯ ಆರ್ಥಿಕ ತಜ್ಞ ಅಬ್ದುಲ್ಲ ಮಾದುಮೂಲೆ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಪ್ರಜಾವಾಣಿ ವರದಿಗಾರ ರಾಜೇಶ್ ರೈ ಚಟ್ಲ (ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಸ್ಥಾಪಿಸಿರುವ ದತ್ತಿ ಪ್ರಶಸ್ತಿ), ಪಬ್ಲಿಕ್ ಟಿವಿ ಹಿರಿಯ ಪತ್ರಕರ್ತ ಬದ್ರುದ್ದೀನ್ ಕೆ. ಮಾಣಿ (ಕೆ.ವಿ.ಆರ್. ಠ್ಯಾಗೋರ್ ಸ್ಮರಣಾರ್ಥ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಹಾಗೂ ಡಾ.ವೆಂಕಟೇಶ್ ತುಪ್ಪಿಲ್ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ವಿಕ್ರಂ ಕಾಂತಿಕೆರೆ (ಹೇರಂಭ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಹಂಝ ಮಲಾರ್ (ಪತ್ರಕರ್ತ ಜೆ.ಆರ್.ಕೆಂಚೇಗೌಡ ಹಾಸನ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಮುಂಬೈ ರೋನ್ಸ್ ಬಂಟ್ವಾಳ್ (ನ್ಯಾಯವಾದಿ ಮೊಹಮ್ಮದ್ ಇಬ್ರಾಹಿಂ ಪಾರ ಸ್ಮರಣಾರ್ಥ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಕೊಡಗು ಜಿಲ್ಲೆಯ ಅಜ್ಜಮಾಡ ರಮೇಶ್ ಕುಟ್ಟಪ್ಪ (ಸಾಹಿತಿ ಸಂಘಟಕ ಪ್ರಭಾಕರ ಕಲ್ಲೂರಾಯ ಬನದಗದ್ದೆ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ದಯಾಸಾಗರ್ ಚೌಟ (ಮೊಗರೋಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಹರ್ಷ ಮೇಲಾಂಟ ಹಾಗೂ ಕುಟುಂಬ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ)ಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ:ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಕಾಸರಗೋಡಿನ ಪ್ರದೀಪ್ ಕುಮಾರ್ ಬೇಕಲ್ ಮತ್ತು ದೇವದಾಸ ಪಾರೆಕಟ್ಟೆ ಆಯ್ಕೆಯಾಗಿದ್ದಾರೆ.
ಮೀನುಗಾರಿಕಾ ದತ್ತಿ ಪ್ರಶಸ್ತಿ:ದೈವ ನರ್ತಕ ಕೀರ್ತಿಶೇಷ ಶ್ರೀದೇವಯ್ಯ ಖಾರ್ವಿ ಗಂಗೊಳ್ಳಿ ಅವರ ಹೆಸರಿನಲ್ಲಿ ಹಿರಿಯ ಪತ್ರಕರ್ತ ವಿನಾಯಕ ಗಂಗೊಳ್ಳಿ ಅವರು ಸ್ಥಾಪಿಸಲು ಉದ್ದೇಶಿಸಿರುವ ಮೀನುಗಾರಿಕಾ ದತ್ತಿ ಪ್ರಶಸ್ತಿಗೂ ಚಾಲನೆ ನೀಡಲಾಗುವುದು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ್, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ ಅವರು ಹಾಜರಿದ್ದರು.
ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 2 =
Remember me
